×
Ad

ಆಟೋ ಚಾಲಕ ವೃತ್ತಿಗೆ ಇಳಿಸಿದ್ದ ವೈದ್ಯ ಕೊಪ್ಪಳ ಆರೋಗ್ಯ ಕಲ್ಯಾಣಾಧಿಕಾರಿಯಾಗಿ ನಿಯೋಜನೆ

Update: 2020-09-10 21:22 IST

ಬೆಂಗಳೂರು, ಸೆ.10: ಜಿಲ್ಲಾ ಆರ್ ಸಿಎಚ್ ಅಧಿಕಾರಿ ಡಾ.ಎಂ.ಎಚ್.ರವೀಂದ್ರನಾಥ್ ದಾವಣಗೆರೆಯಲ್ಲಿ ಬದುಕು ನಿರ್ವಹಣೆಗಾಗಿ ಆಟೋ ಓಡಿಸುತ್ತಿದ್ದಾರೆ ಎಂಬ ಮಾಧ್ಯಮ ವರದಿಗಳು ಗಮನಕ್ಕೆ ಬಂದ ಕೂಡಲೇ ಈ ಬಗ್ಗೆ ಹಿರಿಯ ಅಧಿಕಾರಿಗಳಿಂದ ವರದಿ ಕೇಳಿದ್ದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ತಿಳಿಸಿದ್ದಾರೆ.

ಹಗಲಿರುಳು ಶ್ರಮಿಸುವ ಎಲ್ಲಾ ವೈದ್ಯರ ಹಿತಾಸಕ್ತಿ ಕಾಪಾಡಲು ನಮ್ಮ ಸರಕಾರ ಬದ್ಧ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ತಿಳಿಸಿದ್ದಾರೆ. ಅಂತೆಯೇ ವರದಿ ಪರಿಶೀಲನೆ ಬಳಿಕ ರವೀಂದ್ರನಾಥ್ ಅವರನ್ನು ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ನಿಯೋಜಿಸಲಾಗಿದೆ ಎಂದು ಸಚಿವ ಶ್ರೀರಾಮುಲು ಟ್ವೀಟ್ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News