ಖಾಸಗಿ ಬಸ್-ಬೈಕ್ ಮುಖಾಮುಖಿ ಢಿಕ್ಕಿ: ಇಬ್ಬರು ಸವಾರರು ಮೃತ್ಯು

Update: 2020-09-10 17:08 GMT

ಚಿಕ್ಕಮಗಳೂರು: ಖಾಸಗಿ ಬಸ್ ಹಾಗೂ ಬೈಕ್ ಮುಖಾಮುಖಿ ಢಿಕ್ಕಿಯಾದ ಪರಿಣಾಮ ಬೈಕ್‍ನಲ್ಲಿದ್ದ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ಲಿಂಗದಹಳ್ಳಿ ಗ್ರಾಮದಲ್ಲಿ ಗುರುವಾರ ವರದಿಯಾಗಿದೆ.

ಮೃತರನ್ನು ಕಿರಣ್(26) ಹಾಗೂ ನಾಗರಾಜ್ (30) ಎಂದು ಗುರುತಿಸಲಾಗಿದ್ದು, ಈ ಯುವಕರು ಗುರುವಾರ ಸಂಜೆ ವೇಳೆ ಲಿಂಗದಹಳ್ಳಿಯಿಂದ ತರೀಕೆರೆಗೆ ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ತರೀಕೆರೆಯಿಂದ ಲಿಂಗದಹಳ್ಳಿಯತ್ತ ಬರುತ್ತಿದ್ದ ಬಸ್‍ಗೆ ಅಮೃತ್ ಮಹಲ್ ಎಂಬಲ್ಲಿನ ತಿರುವು ರಸ್ತೆಯಲ್ಲಿ ಮುಖಾಮುಖಿ ಢಿಕ್ಕಿ ಹೊಡೆದಿದೆ. ಈ ವೇಳೆ ಬೈಕ್‍ನಲ್ಲಿದ್ದ ಇಬ್ಬರು ಸವಾರರಿಗೆ ಗಂಭೀರವಾಗಿ ಗಾಯವಾಗಿದೆ. ತೀವ್ರ ರಕ್ತ ಸ್ರಾವವಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ.

ಘಟನೆ ಸಂಬಂಧ ಲಿಂಗದಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News