ಮಾದಕ ವಸ್ತುಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಎಸ್ಪಿಗೆ ಮನವಿ
Update: 2020-09-11 18:58 IST
ಉಡುಪಿ, ಸೆ.11: ಜಿಲ್ಲೆಯಲ್ಲಿ ಮಾದಕ ವಸ್ತುಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ, ಉಡುಪಿ ಜಿಲ್ಲೆಯನ್ನು ಡ್ರಗ್ಸ್ ಮುಕ್ತ ಜಿಲ್ಲೆಯಾಗಿಸುವಂತೆ ಒತ್ತಾಯಿಸಿ ಉಡುಪಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ವತಿಯಿಂದ ಇಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಅವರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಅಕ್ಷಿತ್ ಶೆಟ್ಟಿ ಹೆರ್ಗ, ಶರತ್ ಶೆಟ್ಟಿ ಉಪ್ಪುಂದ, ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ಪ್ರತಾಪ್ ಶೆಟ್ಟಿ, ಉಪಾಧ್ಯಕ್ಷ ಪ್ರವೀಣ್ ಪೂಜಾರಿ ಕಾಪು, ಸುಮಿತ್ ಮಡಿವಾಳ ಕಾರ್ಕಳ, ಅವಿನಾಶ್ ಕಾರ್ಕಳ, ಅಭಿರಾಜ್ ಸುವರ್ಣ, ಅನುರ್ ಮೆಂಡನ್ ಮುಂತಾದವರು ಉಪಸ್ಥಿತರಿದ್ದರು.