×
Ad

ಬ್ಲಾಕ್ ಕಾಂಗ್ರೆಸ್‌ನಿಂದ ಆರೋಗ್ಯ ಹಸ್ತ ಕಿಟ್ ವಿತರಣೆ

Update: 2020-09-11 18:59 IST

ಉಡುಪಿ, ಸೆ.11: ಉಡುಪಿ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ಉಡುಪಿ ನಗರ ಹಾಗೂ ನಾಲ್ಕು ಪಂಚಾಯತ್‌ಗಳಿಗೆ ಪಕ್ಷದ ಆರೋಗ್ಯ ಹಸ್ತ ಕಾರ್ಯಕರ್ತರಿಗೆ ಆರೋಗ್ಯ ಕಿಟ್ ನೀಡುವ ಹಾಗೂ ಅವರ ಕರ್ತವ್ಯದ ಬಗ್ಗೆ ಮಾಹಿತಿ ಕೊಡುವ ಕಾರ್ಯಾಗಾರ ಗುರುವಾರ ಕಾಂಗ್ರೆಸ್ ಭವನದಲ್ಲಿ ಜರಗಿತು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಪ್ರಾಸ್ತಾವಿಕವಾಗಿ ಮಾತನಾಡಿ, ಪಕ್ಷದ ಕೋರೋನಾ ವಾರಿಯರ್ಸ್‌ ಕಾರ್ಯ ಕರ್ತರು ಮನೆ ಮನೆಗೆ ಭೇಟಿ ಕೊಟ್ಟು ತಮ್ಮ ತಮ್ಮ ವಾರ್ಡ್‌ಗಳಲ್ಲಿ ಜನರ ಆರೋಗ್ಯವನ್ನು ವಿಚಾರಿಸಿ ಕೋವಿಡ್-19 ಬಗ್ಗೆ ಜಾಗೃತಿಯ ಕರಪತ್ರವನ್ನು ನೀಡಿ ಜ್ವರ ಇದ್ದವರನ್ನು ವೈದ್ಯರನ್ನು ಸಂಪರ್ಕಿಸುವಂತೆ ಜನ ಜಾಗ್ರತಿಗೊಳಿಸುವಂತೆ ತಿಳಿಸಿದರು.

ವೈದ್ಯರಾದ ಡಾ. ಗೋಪಾಲ ಪೂಜಾರಿ ಹಾಗೂ ಡಾ. ಸಂದೀಪ್ ಸನಿಲ್ ಕೋರೊನಾ ವೈರಸ್ ಸೋಂಕು ಹರಡದಂತೆ ತೆಗೆದುಕೊಳ್ಳಬೇಕಾದ ಮುಂಜಾಗೃತೆಯ ಬಗ್ಗೆ ಮಾಸ್ಕ್, ಸ್ಯಾನಿಟೈಸರ್, ಪಿಪಿಇ ಕಿಟ್, ಫೇಸ್ ಮಾಸ್ಕ್, ಥರ್ಮಲ್ ಸ್ಕ್ಯಾನರ್ ಮತ್ತು ಆಕ್ಸಿಪಲ್ಸ್ ಮೀಟರ್ ಬಳಕೆಯ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ಸಮಗ್ರ ಮಾಹಿತಿ ನೀಡಿ ಜ್ವರ ಕಂಡು ಬಂದಲ್ಲಿ ತಕ್ಷಣ ವೈದ್ಯರನ್ನು ಭೇಟಿಯಾಗುವಂತೆ ಸಲಹೆ ನೀಡಿದರು.

ಉಡುಪಿ ಬ್ಲಾಕ್ ಸಂಯೋಜಕ ಮಂಗಳೂರಿನ ಕಾರ್ಪೊರೇಟರ್ ವಿನಯ ರಾಜ್,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸತೀಶ್‌ಅಮೀನ್ ಪಡುಕರೆ ಮಾತನಾ ಡಿದರು. ಸಂಯೋಜಕರಾದ ಸುಕುಮಾರ್, ಚಂದ್ರಿಕಾ ಶೆಟ್ಟಿ, ನಗರಸಭಾ ಸದಸ್ಯ ಜಯ ಬೈಲೂರು, ಕೇಶವ ಎಂ. ಕೋಟ್ಯಾನ್, ಗಣೇಶ್ ನೆರ್ಗಿ, ಧನಂಜಯ ಕುಂದರ್, ಮಾಧವ ಬನ್ನಂಜೆ, ನಾರಾಯಣ ಕುಂದರ್, ಶ್ರೀನಿವಾಸ್ ಹೆಬ್ಬಾರ್ ಹಾಗೂ ಪಕ್ಷದ ಕೊರೊನಾ ವಾರಿಯರ್ಸ್‌ ಉಪಸ್ಥಿತರಿದ್ದರು.

ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜನಾರ್ದನ ಭಂಡಾರ್ಕರ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News