ಕಿರುಸಾಲ ಯೋಜನೆಯಡಿ ಅರ್ಜಿ ಆಹ್ವಾನ

Update: 2020-09-11 14:03 GMT

ಬೆಂಗಳೂರು, ಸೆ. 11: ಮಹಿಳಾ ಅಭಿವೃದ್ಧಿ ನಿಗಮವು 2019-20ನೆ ಸಾಲಿನ ಕಿರುಸಾಲ ಯೋಜನೆಯಡಿ ಬಳಕೆಯಾಗದ ಅನುದಾನದಡಿ ಪರಿಶಿಷ್ಟ ಜಾತಿ ಸ್ತ್ರೀಶಕ್ತಿ ಸ್ವಸಹಾಯ ಗುಂಪಿನ ಸದಸ್ಯರುಗಳಿಗೆ ಆರ್ಥಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಕಿರುಸಾಲ ಯೋಜನೆಗೆ ಅರ್ಜಿ ಆಹ್ವಾನಿಸಿದೆ.

ಈ ಯೋಜನೆಯಡಿ ಪ್ರತಿ ಗುಂಪಿಗೆ 1 ಲಕ್ಷ ರೂ.ನಿಂದ 5 ಲಕ್ಷ ರೂ.ಗಳ ವರೆಗೆ ಪ್ರೋತ್ಸಾಹಧನವನ್ನು ನೀಡಲಾಗುತ್ತದೆ. 2018-19ನೆ ಸಾಲಿನ ಕಿರುಸಾಲ ಯೋಜನೆಯಡಿ ಬಳಕೆಯಾಗದ ಅನುದಾನದಡಿ ಪರಿಶಿಷ್ಟ ಪಂಗಡ ಸ್ತ್ರೀಶಕ್ತಿ ಸ್ವಸಹಾಯ ಗುಂಪಿನ ಸದಸ್ಯರುಗಳಿಗೆ ಆರ್ಥಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಪ್ರತಿ ಗುಂಪಿಗೆ 1 ಲಕ್ಷ ರೂ.ನಿಂದ 2 ಲಕ್ಷ ರೂ.ಗಳ ವರೆಗೆ ಪ್ರೋತ್ಸಾಹಧನವನ್ನು ನೀಡಲಾಗುತ್ತದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸ್ತ್ರೀಶಕ್ತಿ ಸ್ವಸಹಾಯ ಗುಂಪುಗಳನ್ನು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಆಯ್ಕೆ ಮಾಡಲಾಗುವುದು.

ನಿಗದಿತ ಅರ್ಜಿಗಳನ್ನು ಸೆ.14ರಿಂದ 19ರವರೆಗೆ ವಿತರಿಸಲಾಗುವುದು. ಹಾಗೂ ಭರ್ತಿಯಾದ ಅರ್ಜಿಗಳನ್ನು ಸೆಪ್ಟೆಂಬರ್ 28 ಸಂಜೆ 5.30 ರೊಳಗಾಗಿ ಸಲ್ಲಿಸಬೇಕು. ಅವಧಿ ಮುಗಿದ ನಂತರ ಬರುವ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿ, ಕಿದ್ವಾಯಿ ಆಸ್ಪತ್ರೆ ಹತ್ತಿರ, ಸುಧಾರಣ ಸಂಸ್ಥೆಗಳ ಸಂಕೀರ್ಣ, ಹೊಸೂರು ರಸ್ತೆ, ಧರ್ಮಾವರಂ ಕಾಲೇಜು (ಅ). ಬೆಂಗಳೂರು ನಗರ ಜಿಲ್ಲೆ. ದೂ: 080-2657 8688ಗೆ ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News