ಹತ್ಯೆಗೊಳಗಾದ ಪೂಜಾರಿಗಳ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ: ಸಿಎಂ ಯಡಿಯೂರಪ್ಪ

Update: 2020-09-11 14:07 GMT

ಬೆಂಗಳೂರು, ಸೆ.11: ಮಂಡ್ಯದ ಅರಕೇಶ್ವರ ದೇವಸ್ಥಾನದ ಪೂಜಾರಿಗಳಾಗಿದ್ದ ಗಣೇಶ್, ಪ್ರಕಾಶ್ ಮತ್ತು ಆನಂದ್ ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿ ದೇವಸ್ಥಾನದ ಹುಂಡಿಯನ್ನು ಕಳ್ಳತನ ಮಾಡಿರುವ ವಿಷಯ ತಿಳಿದು ಅತ್ಯಂತ ನೋವಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

ಹತ್ಯೆಗೊಳಗಾದ ದೇವಸ್ಥಾನದ ಪೂಜಾರಿಗಳ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ನೀಡಲಾಗುವುದು. ತಪ್ಪಿತಸ್ಥರ ವಿರುದ್ಧ ಕೂಡಲೇ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News