×
Ad

ಮಂಡ್ಯ ಹತ್ಯೆ ಪ್ರಕರಣ; ಆರೋಪಿಗಳ ಶೀಘ್ರ ಬಂಧನ: ಕೋಟ

Update: 2020-09-11 20:46 IST

ಉಡುಪಿ, ಸೆ.11: ಮಂಡ್ಯ ಜಿಲ್ಲೆ ಅರ್ಘೇಶ್ವರ ದೇವಸ್ಥಾನದ ಅರ್ಚಕರು ಸೇರಿದಂತೆ ಮೂವರ ಹತ್ಯೆ ಪ್ರಕರಣಕ್ಕೆ ತೀವ್ರ ಖೇದ ವ್ಯಕ್ತಪಡಿಸಿರುವ ರಾಜ್ಯ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಆರೋಪಿಗಳು ಎಲ್ಲೆ ಅಡಗಿದ್ದರೂ ಕೂಡಲೇ ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ.

ಉಡುಪಿಯಲ್ಲಿಂದು ಪ್ರತ್ರಿಕ್ರಿಯೆ ನೀಡಿರುವ ಸಚಿವರು, ಇದು ಅತ್ಯಂತ ಹೇಯ ಕೃತ್ಯವಾಗಿದ್ದು, ಸರಕಾರ ಈ ಘಟನೆಯನ್ನು ತೀವ್ರವಾಗಿ ಖಂಡಿಸು ತ್ತದೆ. ಆರೋಪಿಗಳ ಬಂಧನದ ಬಗ್ಗೆ ಗೃಹ ಸಚಿರು ಭರವಸೆ ನೀಡಿದ್ದಾರೆ ಎಂದರು.

ಮುಖ್ಯಮತ್ರಿ ಯಡಿಯೂರಪ್ಪ ಸಂತ್ರಸ್ಥ ಕುಟುಂಬಗಳಿಗೆ ತಲಾ ಐದು ಲಕ್ಷ ಪರಿಹಾರ ನೀಡಲು ಹೇಳಿದ್ದಾರೆ. ಈಗಾಗಲೇ ಮೃತ ಕುಟುಂಬ ಗಳಿಗೆ ಪರಿಹಾರ ಘೋಷಿಸಲಾಗಿದೆ. ನಾಳೆ ಸ್ಥಳಕ್ಕೆ ಭೇಟಿ ನೀಡಿ ಅಗತ್ಯ ನೆರವು ನೀಡ ಲಾಗುವುದು ಎಂದು ಅವರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News