ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

Update: 2020-09-11 15:41 GMT

ಕಾರ್ಕಳ, ಸೆ.11: ಅನಾರೋಗ್ಯದಿಂದ ಬಳಲುತ್ತಿದ್ದ ಮಿಯಾರು ಗ್ರಾಮದ ರಾಮೇರಗುತ್ತು ರಸ್ತೆ ನಿವಾಸಿ ರಾಘು ಪೂಜಾರಿ(56) ಎಂಬವರು ಜೀವನದಲ್ಲಿ ಬೇಸತ್ತು ಸೆ.10ರಂದು ಬೆಳಗ್ಗೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಕೋಣೆ ಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಪು: ಮದ್ಯ ಸೇವನೆಯ ಚಟ ಹೊಂದಿದ್ದ ಉದ್ಯಾವರ ಸಾಲ್ಮರ ನಿವಾಸಿ ಕುಮಾರ(32) ಎಂಬವರು ವೈಯಕ್ತಿಕ ಕಾರಣದಿಂದ ಜೀವನದಲ್ಲಿ ಜಿಗುಪ್ಸೆ ಗೊಂಡು ಸೆ.10ರಂದು ಮಧ್ಯಾಹ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News