ಡಿವೈಎಸ್‍ಪಿ ಗಣಪತಿ ಆತ್ಮಹತ್ಯೆ ಪ್ರಕರಣ: ಮಾಜಿ ಗೃಹ ಸಚಿವ ಕೆ.ಜೆ.ಜಾರ್ಜ್ ಗೆ ಹೈಕೋರ್ಟ್ ರಿಲೀಫ್

Update: 2020-09-11 15:46 GMT

ಬೆಂಗಳೂರು, ಸೆ.11: ಡಿವೈಎಸ್‍ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಗೃಹ ಸಚಿವ ಕೆ.ಜೆ.ಜಾರ್ಜ್ ಗೆ ಹೈಕೋರ್ಟ್ ರಿಲೀಫ್ ನೀಡಿದೆ.

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ವಿಚಾರಣೆಗೆ ನೀಡಿದ್ದ ಸಮನ್ಸ್ ಗೆ ಹೈಕೋರ್ಟ್ ತಡೆ ನೀಡಿದೆ. ಪ್ರಕರಣ ಸಂಬಂಧ ಕೆ.ಜೆ.ಜಾರ್ಜ್, ಐಪಿಎಸ್ ಅಧಿಕಾರಿಗಳಾದ ಪ್ರಣವ್ ಮೋಹಂತಿ, ಎ.ಎಂ.ಪ್ರಸಾದ್‍ಗೆ ಕೋರ್ಟ್ ಸಮನ್ಸ್ ನೀಡಿತ್ತು.

ಜನಪ್ರತಿನಿಧಿಗಳ ನ್ಯಾಯಾಲಯ ನೀಡಿರುವ ಸಮನ್ಸ್ ಅನ್ನು ಪ್ರಶ್ನಿಸಿ ಐಪಿಎಸ್ ಅಧಿಕಾರಿ ಪ್ರಣವ್ ಮೋಹಂತಿ ಅರ್ಜಿ ಸಲ್ಲಿಸಿದ್ದರು.

ಇದರ ವಿಚಾರಣೆ ನಡೆಸಿದ ಹೈಕೋರ್ಟ್ ಸಮನ್ಸ್ ಗೆ ಮಧ್ಯಂತರ ತಡೆ ನೀಡಿ ಆದೇಶ ಹೊರಡಿಸಿದೆ. ಅಲ್ಲದೆ, ವಿಚಾರಣೆಗೆ ಸಂಬಂಧಿಸಿದಂತೆ ಸಿಬಿಐ ವಕೀಲರಿಗೆ ಹೈಕೋರ್ಟ್ ನೋಟಿಸ್ ಕೂಡ ನೀಡಿದೆ. ಈ ಹಿಂದೆ ಸಿಬಿಐ ಸಲ್ಲಿಸಿದ್ದ ಬಿ ರಿಪೋರ್ಟ್ ಅನ್ನು ಹೈಕೋರ್ಟ್ ತಿರಸ್ಕರಿಸಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News