ಕೈಗಾರಿಕಾ ಸ್ಪಂದನ: ಅಹವಾಲು ಸ್ವೀಕಾರ
Update: 2020-09-11 22:19 IST
ಮಂಗಳೂರು, ಸೆ.11: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಸೆಪ್ಟಂಬರ್ ಕೊನೆಯ ವಾರದಲ್ಲಿ ಜಿಲ್ಲಾ ಮಟ್ಟದ ‘ಕೈಗಾರಿಕಾ ಸ್ಪಂದನ’ ಕಾರ್ಯಕ್ರಮ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ಕೈಗಾರಿಕಾ ಪ್ರದೇಶಗಳಲ್ಲಿ ಅಗತ್ಯವಿರುವ ಮೂಲಭೂತ ಸೌಕರ್ಯಗಳ ಹಾಗೂ ಉದ್ದಿಮೆದಾರರ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಬಗ್ಗೆ ಚರ್ಚೆ ನಡೆಯಲಿದೆ. ಜಿಲ್ಲೆಯ ಕೈಗಾರಿಕೋದ್ಯಮಿಗಳು ತಮ್ಮ ಅಹವಾಲು, ಸಲಹೆಗಳು ಇದ್ದಲ್ಲಿ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಯೆಯ್ಯೆಡಿ, ಮಂಗಳೂರು ಇವರಿಗೆ ಸೆ.19ರೊಳಗಾಗಿ ಲಿಖಿತವಾಗಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಂಟಿ ನಿರ್ದೇಶಕರ ಕಚೇರಿ, ಜಿಲ್ಲಾ ಕೈಗಾರಿಕಾ ಕೇಂದ್ರ, ದಕ್ಷಿಣ ಕನ್ನಡ ಜಿಲ್ಲೆ, ಯೆಯ್ಯಿಡಿ. ದೂ.ಸಂ.: 2214021ನ್ನು ಸಂಪರ್ಕಿಸುವಂತೆ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕರ ಪ್ರಕಟನೆ ತಿಳಿಸಿದೆ.