×
Ad

ಸಾರ್ವಜನಿಕ ಗ್ರಂಥಾಲಯಗಳನ್ನು ತೆರೆಯಲು ರಾಜ್ಯ ಸರಕಾರ ಅನುಮತಿ

Update: 2020-09-11 22:31 IST

ಬೆಂಗಳೂರು, ಸೆ.11: ಕೇಂದ್ರ ಸರಕಾರದ ಆದೇಶದನ್ವಯ ಕಂಟೈನ್ಮೆಂಟ್ ವಲಯಗಳನ್ನು ಹೊರತು ಪಡಿಸಿ ಇತರೆ ಎಲ್ಲ ವಲಯಗಳಲ್ಲಿ ಸಾರ್ವಜನಿಕ ಗ್ರಂಥಾಲಯಗಳನ್ನು ತೆರೆಯಲು ರಾಜ್ಯ ಸರಕಾರ ಅನುಮತಿ ನೀಡಿ ಆದೇಶಿಸಲಾಗಿದೆ.

ಕೋವಿಡ್-19 ನಿಯಂತ್ರಿಸುವ ಸಂಬಂಧ ಹೊರಡಿಸಿದ ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಹಾಗೂ ಗ್ರಂಥಾಲಯ ಪ್ರವೇಶಿಸುವವರನ್ನು ಥರ್ಮಲ್ ತಪಾಸಣೆ ನಡೆಸಿ ಸಂಬಂಧಿಸಿದ ಗ್ರಂಥಾಲಯಗಳ ಮುಖ್ಯಸ್ಥರು ಸಾರ್ವಜನಿಕ ಗ್ರಂಥಾಲಯಗಳ ಸೇವೆಯನ್ನು ಸಾರ್ವಜನಿಕರಿಗೆ ಒದಗಿಸತಕ್ಕದ್ದೆಂದು ಸರಕಾರದ ಪ್ರಧಾನ ಕಾರ್ಯದರ್ಶಿ ಅಂಝುಂ ಪರ್ವೇಝ್ ಸೂಚಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News