ಕೇಂದ್ರ ಸರಕಾರ ಹಿಂದಿ ಹೇರುವ ಮೂಲಕ ಒಕ್ಕೂಟ ವ್ಯವಸ್ಥೆ ದುರ್ಬಲಗೊಳಿಸುತ್ತಿದೆ: ಪ್ರೊ.ಕೆ.ಎಸ್.ಭಗವಾನ್

Update: 2020-09-11 18:48 GMT

ಮೈಸೂರು,ಸೆ.11: ಹಿಂದಿ ಭಾಷೆ ಯಾರಿಗೆ ಆಸಕ್ತಿ ಇದೆಯೋ ಅವರು ಕಲಿತರೆ ನಮ್ಮ ಅಭ್ಯಂತರವಿಲ್ಲ. ಆದರೆ, ಒತ್ತಾಯಪೂರ್ವಕವಾಗಿ ಹಿಂದಿ ಭಾಷೆ ಹೇರಿಕೆ ಸಲ್ಲದು ಎಂದು ಖ್ಯಾತ ಸಾಹಿತಿ ಪ್ರಗತಿಪರ ಚಿಂತಕ ಪ್ರೊ.ಕೆ.ಎಸ್.ಭಗವಾನ್ ಹೇಳಿದರು.

ನಗರದ ಇನ್ ಸ್ಟಿಟ್ಯೂಟ್ ಆಫ್ ಇಂಜಿನಿಯರ್ಸ್ ಸಭಾಂಗಣದಲ್ಲಿ ಶುಕ್ರವಾರ ಕನ್ನಡಿಗರ ಮೇಲೆ ಹಿಂದಿ ಹೇರಿಕೆ ಸಂಬಂಧ ಸಾಹಿತಿಗಳು, ಕನ್ನಡಪರ ಹೋರಾಟಗಾರರು ಹಾಗೂ ಕನ್ನಡ ಸಾಹಿತ್ಯ ಸಂಘಟನೆಗಳ ಒಕ್ಕೂಟದ ಮುಖಂಡರೊಂದಿಗೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಹಿಂದಿ ಭಾಷೆ ಹೇರುವ ಮೂಲಕ ಒಕ್ಕೂಟ ವ್ಯವಸ್ಥೆಯನ್ನು ದುರ್ಬಲಗೊಳಿಸುತ್ತಿದೆ. ಹೊಸ ಶಿಕ್ಷಣ ನೀತಿ ಜಾರಿ ಮಾಡುವ ಮೂಲಕ ಇಂಗ್ಲೀಷ್, ಹಿಂದಿ ಹಾಗೂ ಸ್ಥಳೀಯ ಭಾಷೆಗೆ ಒತ್ತು ನೀಡಿ ತ್ರಿಭಾಷಾ ಸೂತ್ರ ಅನುಸರಿಸುತ್ತಿದೆ. ಇದು ಸ್ಥಳೀಯ ಭಾಷೆಗೆ ಮಾರಕವಾಗುವ ನೀತಿಯಾಗಿದೆ ಎಂದು ಕಿಡಿಕಾರಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News