×
Ad

ಬಿಹಾರ ಸಿಎಂ ನಿತೀಶ್ ಕುಮಾರ್‌ರನ್ನು ಭೇಟಿಯಾದ ಬಿಜೆಪಿಯ ಉನ್ನತ ನಾಯಕರು

Update: 2020-09-12 12:56 IST

ಪಾಟ್ನಾ, ಸೆ.12: ಬಿಹಾರದಲ್ಲಿರುವ ಬಿಜೆಪಿಯ ಉನ್ನತ ನಾಯಕರು ಶನಿವಾರ ಮುಖ್ಯಮಂತ್ರಿ ನಿತೀಶ್ ಕುಮಾರ್‌ರನ್ನು ಭೇಟಿಯಾಗಿ ಈ ವರ್ಷಾಂತ್ಯದಲ್ಲಿ ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಜಂಟಿಯಾಗಿ ಹೋರಾಡುವ ಕುರಿತು ಚರ್ಚಿಸುವ ಮೂಲಕ ತನ್ನ ತಯಾರಿಯನ್ನು ಆರಂಭಿಸಿದ್ದಾರೆ.

ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಎರಡು ದಿನಗಳ ರಾಜ್ಯ ಭೇಟಿಯಲ್ಲಿದ್ದು, ಕುಮಾರ್ ಅವರನ್ನು ಅವರ ಅಧಿಕೃತ ನಿವಾಸದಲ್ಲಿ ಭೇಟಿಯಾಗಿ ಚುನಾವಣೆಯಲ್ಲಿ ಸೀಟು ಹಂಚಿಕೆ ವಿಚಾರವನ್ನು ಚರ್ಚಿಸಿದ್ದಾರೆ.

ಬಿಹಾರ ಚುನಾವಣೆಯಲ್ಲಿ ಪಕ್ಷದ ಅಭಿಯಾನವನ್ನು ನಿರ್ವಹಿಸುವ ಗುರಿ ಪಡೆದಿರುವ ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಹಾಗೂ ಬಿಜೆಪಿಯ ರಾಷ್ಟ್ರೀಯ ಕಾರ್ಯದರ್ಶಿ ಭೂಪೇಂದ್ರ ಯಾದವ್ ಪಾಟ್ನಾದಲ್ಲಿ ನಿತೀಶ್ ಕುಮಾರ್ ಭೇಟಿಯ ವೇಳೆ ಉಪಸ್ಥಿತರಿದ್ದರು.

 "ಮುಂಬರುವ ಚುನಾವಣೆಯಲ್ಲಿ ಬಿಹಾರವು ಎನ್‌ಡಿಎ ಸರಕಾರವನ್ನು ಆಯ್ಕೆ ಮಾಡುವ ವಿಶ್ವಾಸ ನನಗಿದೆ.ಎನ್‌ಡಿಎ ಸರಕಾರದಲ್ಲಿ ಯುವಕರ ಭವಿಷ್ಯ ಉತ್ತಮವಾಗಿದೆ. ಮುಂದಿನ ದಿನಗಳಲ್ಲಿ ಬಿಹಾರ ಚುನಾವಣೆಯ ದಿನಾಂಕ ಘೋಷಣೆಯಾಗಲಿದೆ. ಪಕ್ಷವು ನನಗೆ ಇಲ್ಲಿ ಕೆಲಸ ಮಾಡಲು ಅವಕಾಶ ನೀಡಿದೆ'' ಎಂದು ಫಡ್ನವಿಸ್ ಸುದ್ದಿಗಾರರಿಗೆ ತಿಳಿಸಿದರು.

ಚಿರಾಗ್ ಪಾಸ್ವಾನ್ ನೇತೃತ್ವದ ಲೋಕ ಜನಶಕ್ತಿ ಪಕ್ಷ ಅಥವಾ ಎಲ್‌ಜೆಪಿಯೊಂದಿಗೆ ನಿತೀಶ್ ಕುಮಾರ್ ಮೈತ್ರಿಯ ಕುರಿತು ಅನಿಶ್ಚಿತತೆ ಮುಂದುವರಿದಿರುವ ನಡುವೆ ಬಿಜೆಪಿಯ ನಾಯಕರು ಕುಮಾರ್‌ರನ್ನು ಭೇಟಿಯಾಗಿದ್ದಾರೆ. ಕೊರೋನ ವೈರಸ್ ಹಾಗೂ ಪ್ರವಾಹ ನಿರ್ವಹಣೆಯಲ್ಲಿ ನಿತೀಶ್ ಕುಮಾರ್ ಸರಕಾರವನ್ನು  ಎಲ್‌ಜೆಪಿ ಟೀಕಿಸುತ್ತಾ ಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News