×
Ad

ಕೋಟೆಕಾರ್: ಅಕ್ರಮ ಸಾಗಾಟದ 225 ಲೀ. ಮದ್ಯ ವಶ; ಇಬ್ಬರು ಆರೋಪಿಗಳ ಬಂಧನ

Update: 2020-09-12 15:40 IST

ಉಳ್ಳಾಲ, ಸೆ.12: ತೊಕ್ಕೊಟ್ಟುವಿನಿಂದ ಕೇರಳ ಕಡೆಗೆ ಕಾರಿನಲ್ಲಿ ಅಕ್ರಮ ಮದ್ಯ ಸಾಗಿಸುತ್ತಿದ್ದ ಆರೋಪದಲ್ಲಿ ಇಬ್ಬರು ಆರೋಪಿಗಳನ್ನು ದಕ್ಷಿಣ ಪೊಲೀಸ್ ಉಪ ವಿಭಾಗದ ಎಸಿಪಿ ನಿರ್ದೇಶನದಂತೆ ಉಳ್ಳಾಲ ಠಾಣಾಧಿಕಾರಿ ನೇತೃತ್ವದ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ  26 ಬಾಕ್ಸ್ ಗಳಲ್ಲಿದ್ದ 225 ಲೀ. ಮದ್ಯ ಹಾಗೂ ಸಾಗಾಟಕ್ಕೆ ಬಳಸುತ್ತಿದ್ದ ಕಾರನ್ನು ವಶಕ್ಕೆ ಪಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಬಂದ್ಯೋಡು ಮಂಗಲ್ಪಾಡಿಯ ರೆಜಿನ್ (23) ಮತ್ತು ಧೀರಜ್ (21)  ಬಂಧಿತ ಆರೋಪಿಗಳು.‌

ಇಬ್ಬರು ದಾಖಲೆಗಳಿಲ್ಲದ ಕಾರಿನಲ್ಲಿ ಅಕ್ರಮ ಮದ್ಯ ಸಾಗಾಟ ನಡೆಸುತ್ತಿರುವ ಖಚಿತ ಮಾಹಿತಿ ಪಡೆದ ಉಳ್ಳಾಲ ಪೊಲೀಸರು ಕೋಟೆಕಾರು ಅಜ್ಜನಕಟ್ಟೆ ಬಳಿ ತಪಾಸಣೆ ನಡೆಸಿ ವಶಕ್ಕೆ ಪಡೆದುಕೊಂಡಿದ್ದಾರೆ. ಕೋಟೆಕಾರು ಬಳಿ ಕಾರು ನಿಲ್ಲಿಸಲು ಸೂಚಿಸಿದಾಗ ಚಾಲಕ ಕಾರು ನಿಲ್ಲಿಸದೆ ಪರಾರಿಯಾಗಲು ಯತ್ನಿಸಿದ್ದರು. ಈ ವೇಳೆ ಪೊಲೀಸರು ಸುತ್ತುವರಿದು ಕಾರಿಗೆ ಅಡ್ಡಗಟ್ಟಿ ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News