ಸರಗಳ್ಳತನ ಪ್ರಕರಣ ಭೇದಿಸಿದ ಪೊಲೀಸರು: 6 ಆರೋಪಿಗಳ ಬಂಧನ, ಚಿನ್ನಾಭರಣ ಜಪ್ತಿ

Update: 2020-09-12 18:10 GMT

ಬೆಂಗಳೂರು, ಸೆ.12: ಒಂಟಿ ಮಹಿಳೆಯರನ್ನು ಗುರಿಯಾಗಿಸಿಕೊಂಡು ಕಳ್ಳತನ ಮಾಡುತ್ತಿದ್ದ ಆರೋಪದಡಿ ಆರು ಜನರನ್ನು ಬಂಧಿಸಿರುವ ಉತ್ತರ ವಿಭಾಗದ ಪೊಲೀಸರು, 20 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ರಾಜಸ್ಥಾನ ಮೂಲದ ಚಗನ್‍ಲಾಲ್ ಡಿ ಮಾಲಿ, ಪಂಜಾಬ್ ಮೂಲದ ಅರ್ಜುನ್ ಸಿಂಗ್(32), ರಾಕೇಶ್(40), ಸೋನುಕುಮಾರ್(27) ಸೇರಿದಂತೆ ಆರು ಜನರನ್ನು ಬಂಧಿಸಲಾಗಿದೆ ಎಂದು ಡಿಸಿಪಿ ಧರ್ಮೇಂದ್ರ ಕುಮಾರ್ ಮೀನಾ ತಿಳಿಸಿದ್ದಾರೆ.

ಸರಗಳ್ಳನ ಪ್ರಕರಣದಲ್ಲಿ ಈ ಹಿಂದೆಯೇ ಉತ್ತರ ಪ್ರದೇಶದ ಮೂಲದ ಶುಭಾಷ್ ಕುಮಾರ್(24) ಮತ್ತು ಪಂಜಾಬ್ ಮೂಲದ ಸಂಜಯ್(30) ಬಂಧಿಸಿ ನಡೆಸಿದ ವಿಚಾರಣೆ ವೇಳೆ ನೀಡಿದ ಮಾಹಿತಿ ಆಧರಿಸಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದರು.

ಆ.31ರಂದು ಮುಂಜಾನೆ ರಾಜಾಜಿನಗರದ ಹಳೇ ಪೊಲೀಸ್ ಠಾಣೆ ಹತ್ತಿರ ಮನೆ ಮುಂದೆ ನಿಂತಿದ್ದ 61 ವರ್ಷದ ಮಹಿಳೆಯ ಚಿನ್ನದ ಸರವನ್ನು ಬೈಕ್‍ನಲ್ಲಿ ಬಂದ ಸರಗಳ್ಳರು ಕಿತ್ತುಕೊಂಡು ಪರಾರಿಯಾಗುತ್ತಿದ್ದರು. ಈ ಬಗ್ಗೆ ಮಾಹಿತಿ ಸಂಗ್ರಹಿಸಿ ಆರೋಪಿಗಳನ್ನು ಬಂಧಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ಬಹುಮಾನ: ಈ ಪ್ರಕರಣದಲ್ಲಿ ಉತ್ತಮ ತನಿಖೆ ಮಾಡಿ ಆರೋಪಿಗಳನ್ನು ಬಂಧಿಸಿದ ತಂಡವನ್ನು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಅವರು ಶ್ಲಾಘಿಸಿ, 25 ಸಾವಿರ ರೂ. ನಗದು ಬಹುಮಾನ ಮತ್ತು ಪ್ರಶಂಸನ ಪತ್ರ ನೀಡಿದ್ದಾರೆ ಎಂದು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News