ಕೊಡಗು ಜಿಲ್ಲೆಯ ವಿವಿಧೆಡೆ ನಿರಂತರ ಮಳೆ: ಇನ್ನೆರಡು ದಿನ ಮಳೆ ಮುಂದುವರಿಯುವ ಸಾಧ್ಯತೆ

Update: 2020-09-12 13:14 GMT

ಮಡಿಕೇರಿ, ಸೆ.12: ಕೊಡಗು ಜಿಲ್ಲೆಯ ವಿವಿಧೆಡೆ ನಿರಂತರವಾಗಿ ಮಳೆಯಾಗುತ್ತಿದ್ದು, ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಭಾಗಮಂಡಲ ಮತ್ತು ತಲಕಾವೇರಿಯಲ್ಲಿ ಧಾರಾಕಾರವಾಗಿ ಮಳೆಯಾಗುತ್ತಿದ್ದು, ತ್ರಿವೇಣಿ ಸಂಗಮದಲ್ಲಿ ನೀರಿನ ಹರಿವು ಹೆಚ್ಚಾಗಿದೆ. 

ಮಡಿಕೇರಿ ಹಾಗೂ ನಾಪೋಕ್ಲು ಭಾಗದಲ್ಲೂ ಉತ್ತಮ ಮಳೆಯಾಗುತ್ತಿದ್ದು, ಚಳಿಯ ವಾತಾವರಣ ಮನೆ ಮಾಡಿದೆ. ಸೋಮವಾರಪೇಟೆ ಮತ್ತು ವಿರಾಜಪೇಟೆ ತಾಲೂಕಿನ ವಿವಿಧೆಡೆ ಬೆಳಗ್ಗಿನಿಂದಲೇ ಮಳೆಯಾಗುತ್ತಿದೆ. ಇನ್ನೆರಡು ದಿನ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News