ಕುಂದಾಪುರ: ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ
Update: 2020-09-12 19:48 IST
ಉಡುಪಿ, ಸೆ.12: ಕರ್ನಾಟಕ ಅರಣ್ಯ ಇಲಾಖೆಯ ವತಿಯಿಂದ ಆಚರಿಸುವ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆಯನ್ನು ಶುಕ್ರವಾರ ಕುಂದಾಪುರ ಪ್ರಾದೇಶಿಕ ಅರಣ್ಯ ವಿಭಾಗದ ವತಿಯಿಂದ ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಉಪಅರಣ್ಯ ಸಂರಕ್ಷಣಾಧಿಕಾರಿ ಆಶೀಶ್ ರೆಡ್ಡಿ ಎಂ, ವೀರಪ್ಪನ್ ಕಾರ್ಯಾಚರಣೆಯಲ್ಲಿ ಮಡಿದ ಅರಣ್ಯ ಹುತಾತ್ಮ ಪಿ.ಶ್ರೀನಿವಾಸ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿ, ಗಡಿಭಾಗ ದಲ್ಲಿ ಸೈನಿಕರು ಹೇಗೆ ದೇಶ ಸೇವೆ ಮಾಡು ತ್ತಾರೋ ಹಾಗೇ ನಾಡಿನ ಒಳಗೆ ತಮ್ಮ ಇಲಾಖೆಯ ಸಿಬ್ಬಂದಿಗ ಅರಣ್ಯ ಸೇವೆಯನ್ನು ಶ್ಲಾಸಿದರು.
ಕಾರ್ಯಕ್ರಮದಲ್ಲಿ ಕುಂದಾಪುರ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಜಿ. ಲೋಹಿತ್, ತರಬೇತಿಯಲ್ಲಿರುವ ಸಹಾಯಕ ಅರಣ್ಯ ಸಂರಕ್ಷಣಾ ಅಧಿಕಾರಿ ಮಾರ್ಕಂಡೇಯ ಉಪಸ್ಥಿತರಿದ್ದರು.
ಪತ್ರಾಂಕಿತ ವ್ಯವಸ್ಥಾಪಕ ಉದಯ್ ಕುಮಾರ ಟಿ ಸ್ವಾಗತಿಸಿ ನಿರೂಪಿಸಿದರು. ಕುಂದಾಪುರ ವಲಯ ಅರಣ್ಯಾಧಿಕಾರಿ ಪ್ರಭಾಕರ್ ಕುಲಾಲ್ ವಂದಿಸಿದರು.