ಮಂಡ್ಯ: ಕೊಲೆಯಾದ ಅರ್ಚಕರ ಕುಟುಂಬಕ್ಕೆ ಚೆಕ್ ವಿತರಿಸಿದ ಸಚಿವ ಕೋಟ

Update: 2020-09-12 18:04 GMT

ಮಂಡ್ಯ, ಸೆ.12: ನಗರದ ಅರಕೇಶ್ವರ ದೇವಾಲಯದಲ್ಲಿ ಕೊಲೆಯಾದ ಮೂವರು ಅರ್ಚಕರ ಕುಟುಂಬದವರಿಗೆ ಶನಿವಾರ ಸಾಂತ್ವನ ಹೇಳಿದ ಮುಜರಾಯಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪ್ರಜಾರಿ, ತಲಾ 5 ಲಕ್ಷ ರೂ.ಗಳ ಚೆಕ್ ನೀಡಿದರು.

ನಂತಗರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಅರಕೇಶ್ವರ ದೇವಾಲಯದ ಪ್ರಕರಣವನ್ನು ಸರಕಾರ ಗಂಭೀರವಾಗಿ ಪರಿಗಣಿಸಿದೆ. ಕೂಡಲೇ ದುಷ್ಕರ್ಮಿಗಳನ್ನು ಪತ್ತೆಹಚ್ಚು ಕಠಿಣ ಶಿಕ್ಷೆ ಆಗುವಂತೆ ಮಾಡಲಾಗುವುದು ಎಂದರು.

ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಅರವಿಂದ ಬಾಬು ಬೇಜವಾಬ್ಧಾರಿತನದಿಂದ ಕರ್ತವ್ಯ ಲೋಪ ಎಸಗಿದ್ದಾರೆಂಬ ದೂರು ಬಂದಿದೆ. ಇದರ ಬಗ್ಗೆ ತನಿಖೆ ನಡೆಸಿ ಸೇವೆಯಿಂದ ಅಮಾನತುಗೊಳಿಸಲಾಗುವುದು ಎಂದು ಅವರು ತಿಳಿಸಿದರು.

ದೇವಾಲಯದಲ್ಲಿ ಹಲವು ತಿಂಗಳು ಹುಂಡಿಯನ್ನು ತೆರೆಯದೆ ಇರುವುದರಿಂದ ದುರ್ಘಟನೆ ಸಂಭವಿಸಿದೆ. ಇನ್ನು ಮುಂದೆ ಮುಜರಾಯಿ ಇಲಾಖೆ ದೇವಾಲಯಗಳ ಹುಂಡಿಯನ್ನು ತಿಂಗಳಿಗೊಮ್ಮೆ ಅಥವಾ ಅದಕ್ಕೂ ಮುನ್ನ ಭರ್ತಿಯಾದರೆ ತೆರೆಯಲು ಕ್ರಮವಹಿಸಲಾಗುವುದು ಎಂದು ಅವರು ಹೇಳಿದರು.

ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡ, ಮುಜರಾಯಿ ಇಲಾಖೆ ಆಯುಕ್ತೆ ರೋಹಿಣಿ ಸಿಂಧೂರಿ, ಇತರೆ ಮುಖಂಡರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News