ಬಿಬಿಎಂಪಿಗೆ ಆಡಳಿತ ಅಧಿಕಾರಿ ನೇಮಕ ಪ್ರಶ್ನಿಸಿ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಕೆ

Update: 2020-09-13 13:14 GMT

ಬೆಂಗಳೂರು, ಸೆ. 13: ಬಿಬಿಎಂಪಿ ಆಡಳಿತ ಅಧಿಕಾರಿಯನ್ನು ನೇಮಕ ಮಾಡಿರುವುದನ್ನು ಪ್ರಶ್ನಿಸಿ ಹಾಗೂ ಪಾಲಿಕೆಯ ಚುನಾವಣೆಯನ್ನು ಶೀಘ್ರ ನಡೆಸಲು ಸರಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಆಡಳಿತ ಪಕ್ಷದ ಮಾಜಿ ನಾಯಕ ಅಬ್ದುಲ್ ವಾಜಿದ್ ಹಾಗೂ ಎಂ.ಶಿವರಾಜು ಅವರು ಹೈಕೋರ್ಟ್ ಗೆ ಪಿಐಎಲ್ ಸಲ್ಲಿಕೆ ಮಾಡಿದ್ದಾರೆ.

ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಎ.ಎಸ್.ಓಕಾ ನೇತೃತ್ವದ ವಿಭಾಗೀಯ ಪೀಠದಲ್ಲಿ ನಡೆಯಲಿದೆ. ಅರ್ಜಿಯು ಸೋಮವಾರ ವಿಚಾರಣೆಗೆ ಬರುವ ಸಾಧ್ಯತೆ ಇದೆ.

ಅರ್ಜಿಯಲ್ಲಿ ಏನಿದೆ: ಕೆಎಂಸಿ ಕಾಯ್ದೆಯಲ್ಲಿ ಆಡಳಿತಾಧಿಕಾರಿಯನ್ನು ನೇಮಕ ಮಾಡುವುದಕ್ಕೆ ಅವಕಾಶವೇ ಇಲ್ಲ. ಆಡಳಿತಾಧಿಕಾರಿ ನೇಮಕ ಮಾಡುವುದು ಕಾನೂನು ಬಾಹಿರ. ಇದನ್ನು ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದೇವೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News