ಕೆ.ಗುರುರಾಜ್ ರಾವ್

Update: 2020-09-13 15:32 GMT

ಉಡುಪಿ, ಸೆ.13: ಉಡುಪಿ ಯಕ್ಷಗಾನ ಕಲಾರಂಗದ ಕಾರ್ಯಕಾರಿ ಸಮಿತಿ ಸದಸ್ಯರಾಗಿದ್ದ ಕೆ. ಗುರುರಾಜ್ ರಾವ್ (78) ರವಿವಾರ ಮುಂಜಾನೆ ನಿಧನ ರಾದರು. ಸರಕಾರಿ ಶಿಕ್ಷಕ ತರಬೇತಿ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ಇವರು ಯಕ್ಷಗಾನ ತಾಳಮದ್ದಲೆ ಅರ್ಥಧಾರಿಯಾಗಿಯೂ ಪ್ರಸಿದ್ಧರು. ಪತ್ನಿ, ಇಬ್ಬರು ಪುತ್ರರುಹಾಗೂ ಬಂಧುಗಳನ್ನು ಅಗಲಿದ್ದಾರೆ.

ಗುರುರಾಜ ರಾವ್ ಇವರ ನಿಧನಕ್ಕೆ ಯಕ್ಷಗಾನ ಕಲಾರಂಗದ ಅಧ್ಯಕ್ಷ ಕೆ. ಗಣೇಶ್ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ಸಂತಾಪ ವ್ಯಕ್ತಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ