ಕ್ರೀಡಾ ಪೋಷಕ ಪ್ರಶಸ್ತಿಗೆ ಅರ್ಜಿ ಆಹ್ವಾನ

Update: 2020-09-13 15:36 GMT

ಉಡುಪಿ, ಸೆ.13: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖಾ ವತಿಯಿಂದ ರಾಜ್ಯದ ಕ್ರೀಡಾ ಪೋಷಕರಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಕ್ರೀಡಾ ಪೋಷಕ ಪ್ರಶಸ್ತಿಯನ್ನು ನೀಡಲಾಗುತ್ತಿದ್ದು ಇದಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಕಳೆದ ಐದು ವರ್ಷಗಳಲ್ಲಿ ರಾಜ್ಯ/ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಕ್ರೀಡಾಕ್ಷೇತ್ರದಲ್ಲಿ ಕೊಡುಗೆ ನೀಡಿದ ಕ್ರೀಡಾಪೋಷಕರು ಈ ಪ್ರಶಸ್ತಿಗೆ ಅರ್ಹರು. ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಇಲ್ಲಿಗೆ ಸೆ.16ರೊಳಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ಜಿಲ್ಲೆ (0820-2521324, 94808-86467) ಇವರನ್ನು ಸಂಪರ್ಕಿಸುವಂತೆ ಇಲಾಖೆಯ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News