ಮಹಿಳಾ ಅಭಿವೃದ್ಧಿ ನಿಗಮ ಯೋಜನೆಗೆ ಅರ್ಜಿ ಆಹ್ವಾನ

Update: 2020-09-13 15:37 GMT

ಉಡುಪಿ, ಸೆ.13: ಪ್ರಸಕ್ತ ಸಾಲಿನ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಯೋಜನೆಗಳಾದ ಉದ್ಯೋಗಿನಿ, ಧನಶ್ರೀ, ಚೇತನ ಮತ್ತು ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆಯನ್ನು ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಲು ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ನಮೂನೆಯನ್ನು ಆಯಾ ತಾಲೂಕು ಶಿಶು ಅಭಿವೃದ್ಧಿ ಯೋಜನಾ ಧಿಕಾರಿಗಳ ಕಛೇರಿಯಿಂದ ಪಡೆದು ಸೆ.30ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರಜತಾದ್ರಿ, ಮಣಿಪಾಲ (ದೂರವಾಣಿ:0820-2574978) ಇವರನ್ನು ಸಂಪರ್ಕಿಸುವಂತೆ ಇಲಾಖೆಯ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News