ನಾಳೆಯಿಂದ ಕರ್ನಾಟಕ ರಾಷ್ಟ್ರ ಸಮಿತಿ ವತಿಯಿಂದ ರಾಜ್ಯಾದ್ಯಂತ ಸೈಕಲ್ ರ‍್ಯಾಲಿ

Update: 2020-09-13 16:01 GMT

ಬೆಂಗಳೂರು, ಸೆ. 13: ರಾಜ್ಯ ಜನತೆಯನ್ನು ಸ್ವಚ್ಚ, ಪ್ರಾಮಾಣಿಕ ರಾಜಕಾರಣಕ್ಕಾಗಿ ಸಜ್ಜುಗೊಳಿಸುವ ನಿಟ್ಟಿನಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ನಾಳೆಯಿಂದ ರಾಜ್ಯಾದ್ಯಂತ ಸೈಕಲ್ ರ‍್ಯಾಲಿಯನ್ನು ಆರಂಭಿಸುತ್ತಿದೆ.

ಕೆಆರ್‍ಎಸ್ ಪಕ್ಷದ ರಾಜ್ಯಾಧ್ಯಕ್ಷ ರವಿಕೃಷ್ಣಾರೆಡ್ಡಿ ನೇತೃತ್ವದಲ್ಲಿ ಮೂರು ಹಂತಗಳಲ್ಲಿ ಸೈಕಲ್‍ ರ‍್ಯಾಲಿ ಹಮ್ಮಿಕೊಳ್ಳಲಾಗಿದ್ದು, ಮೊದಲ ಹಂತವಾಗಿ ಸೆ.14ರಂದು ಬೆಳಗ್ಗೆ 11ಕ್ಕೆ ಕೋಲಾರದಿಂದ ಚಾಲನೆ ಸಿಗಲಿದೆ. ನಂತರ ಚಿಂತಾಮಣಿ ಹಾಗೂ ಶಿಡ್ಲಘಟ್ಟಕ್ಕೆ ಸಾಗಲಿದೆ. ಸುಮಾರು 15 ದಿವಸ ನಡೆಯುವ ಮೊದಲ ಹಂತದ ರ‍್ಯಾಲಿಯಲ್ಲಿ ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಗ್ರಾಮಾಂತರ, ರಾಮನಗರ, ಮಂಡ್ಯ, ಚಾಮರಾಜನಗರ, ಮೈಸೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಸಂಚರಿಸಿ ಜನರೊಂದಿಗೆ ಸಂವಾದ, ಚರ್ಚೆ ನಡೆಸಲಿದ್ದಾರೆ.

ರಾಜ್ಯವು ಭ್ರಷ್ಟ ರಾಜಕೀಯ ಮತ್ತು ಆಡಳಿತ ವ್ಯವಸ್ಥೆಯಿಂದ ನಲುಗಿದೆ. ಈ ಭ್ರಷ್ಟ ವ್ಯವಸ್ಥೆಯಿಂದ ಜನತೆ ಹಾಗೂ ನಾಡಿನ ಸಂಪತ್ತು ನಾಶವಾಗುತ್ತಿದೆ. ಕೊರೋನ ಸಂದರ್ಭದಲ್ಲೂ ಆರೋಗ್ಯ ಇಲಾಖೆಯಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಈ ವಿಷಯಗಳನ್ನು ಮುಂದಿಟ್ಟುಕೊಂಡು ಜನತೆಯೊಂದಿಗೆ ಚರ್ಚಿಸಿ ಸ್ವಚ್ಚ, ಪ್ರಾಮಾಣಿಕ ಮತ್ತು ಜನಪರ ರಾಜಕಾರಣದ ಅವಶ್ಯಕತೆಯ ಬಗ್ಗೆ ತಿಳಿಸಲು ಸೈಕಲ್ ರ‍್ಯಾಲಿಯನ್ನು ಆಯೋಜಿಸಲಾಗಿದೆ ಎಂದು ಕೆಆರ್‍ಎಸ್ ಪಕ್ಷದ ಪ್ರಕಟನೆಯಲ್ಲಿ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News