ಬ್ರಹ್ಮಾವರ: ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಸನ್ಮಾನ

Update: 2020-09-13 16:38 GMT

ಬ್ರಹ್ಮಾವರ, ಸೆ.13: ಎಸ್‌ಸಿ ಎಸ್‌ಟಿ ಮಾಧ್ಯಮಿಕ ಮತ್ತು ಪ್ರಾಥಮಿಕ ಶಿಕ್ಷಕರ ಕ್ಷೇಮಾಭಿವೃದ್ಧಿ ಸಂಘ ಉಡುಪಿ ಜಿಲ್ಲೆ ಮತ್ತು ಬ್ರಹ್ಮಾವರ ವಲಯ ವೇದಿಕೆಯ ವತಿಯಿಂದ ಜಿಲ್ಲೆಯಲ್ಲಿ ಹಲವಾರು ಶೈಕ್ಷಣಿಕ ಸುಧಾರಣೆಯನ್ನು ತಂದ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶೇಷಶಯನ ಕಾರಿಂಜ ಅವರನ್ನು ಶನಿವಾರ ಸನ್ಮಾನಿಸಲಾಯಿತು.

ಸಮಾರಂಭದಲ್ಲಿ ಉಡುಪಿ ಜಿಪಂ ಅಧ್ಯಕ್ಷ ದಿನಕರ ಬಾಬು ಡಾ.ಬಿ.ಆರ್. ಅಂಬೇಡ್ಕರ್ ಭಾವಚಿತ್ರಕ್ಕೆ ಮಾರ್ಲಾಪಣೆ ಮಾಡಿದರು. ಇದೇ ಸಂದರ್ಭದಲ್ಲಿ ಸಮುದಾಯದ ಜಿಲ್ಲಾ ಉತ್ತಮ ಶಿಕ್ಷಕರಾದ ಶೇಸು, ಪ್ರೇಮಾನಂದ, ಉದಯ ಕುಮಾರ್, ಭಾಸ್ಕರ್ ನಾಯ್ಕೆ, ಕೃಷ್ಣಪ್ಪ ಅವರನ್ನು ಸನ್ಮಾನಿಸಲಾಯಿತು.

ಎಸೆಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ವೇದಿಕೆಯ ಜಿಲ್ಲಾಧ್ಯಕ್ಷ ನಾರಾಯಣ ಮಣೂರು ಮಾತನಾಡಿದರು. ವಿಠಲ್‌ದಾಸ್ ಬನ್ನಂಜೆ, ಉಪಪ್ರಾಂಶುಪಾಲ ಬಿ.ಟಿ.ನಾಯ್ಕಾ, ನಿವೃತ್ತ ಮುಖ್ಯಶಿಕ್ಷಕ ಸುಂದರ್ ಮಾಸ್ತರ್, ಬ್ರಹ್ಮಾವರ ವಲಯ ಅಧ್ಯಕ್ಷ ವರದರಾಜ್ ಬಿರ್ತಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಶಂಕರ್‌ದಾಸ್ ಚೇಂಡ್ಕಳ ಕ್ರಾಂತಿಗೀತೆಗಳನ್ನು ಹಾಡಿದರು. ಶ್ಯಾಮ್‌ರಾಜ್ ಬಿರ್ತಿ ಸಮುದಾಯದ ಚಿಂತನೆ ಮಾಡಿದರು. ಶಿಕ್ಷಕ ಹೆರಿಯ ಮಾಸ್ಟರ್ ಸನ್ಮಾನಿತರ ಪರಿಚಯ ಮಾಡಿದರು. ಸುಧಾಕರ್ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News