ಕಲಾಬಾಗಿಲು: ರಮಾನಾಥ ರೈ ಹುಟ್ಟು ಹಬ್ಬದ ಪ್ರಯುಕ್ತ ರಕ್ತದಾನ ಶಿಬಿರ

Update: 2020-09-14 09:17 GMT

ಬಿ.ಸಿ.ರೋಡ್: ಬಂಟ್ವಾಳ ಬ್ಲಾಕ್ ಕಾಂಗ್ರೆಸ್, ಬಂಟ್ವಾಳ ಯುವ ಕಾಂಗ್ರೆಸ್, ಮತ್ತು ಇರ್ವತ್ತೂರು ವಲಯ ಕಾಂಗ್ರೆಸ್ ಸಮಿತಿ ವತಿಯಿಂದ ದೇರಳಕಟ್ಟೆ ಕೆ.ಎಸ್.ಹೆಗ್ಡೆ ಆಸ್ಪತ್ರೆ ಇವರ ಸಹಕಾರದೊಂದಿಗೆ ಮಾಜಿ ಸಚಿವ ಬಿ.ರಮಾನಾಥ ರೈ ಅವರ ಹುಟ್ಟು ಹಬ್ಬದ ಪ್ರಯುಕ್ತ ಕಲಾಬಾಗಿಲು ರಝಾನಗರದ ಬುರೂಜ್ ಆಂಗ್ಲ ಮಾದ್ಯಮ ಪ್ರೌಡ ಶಾಲಾ ಸಭಾಂಗಣದಲ್ಲಿ ರವಿವಾರ ರಕ್ತದಾನ ಶಿಬಿರ ನಡೆಯಿತು.

ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಮಾಜಿ ಸಚಿವ ಬಿ.ರಮಾನಾಥ ರೈ, ಮನುಷ್ಯನ ಪ್ರಾಣವನ್ನು ಕಾಪಾಡುವಂತಹ ರಕ್ತದಾನವು ಅತ್ಯಂತ ಶ್ರೇಷ್ಟ ದಾನವಾಗಿದ್ದು ಇಂತಹ ಯುವ ಜನತೆ ಇಂತಹ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು ಎಂದರು. 

ಜಿ.ಪಂ. ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ರಾಜೀವ್ ಶೆಟ್ಟಿ ಎಡ್ತೂರ್ ಮಾತನಾಡಿದರು. ಈ ಸಂದರ್ಭದಲ್ಲಿ ರೈ ಯವರ ಹುಟ್ಟು ಹಬ್ಬವನ್ನು ಕೇಕ್ ಕತ್ತರಿಸುವ ಮೂಲಕ ಆಚರಿಸಲಾಯಿತು.

ವೇದಿಕೆಯಲ್ಲಿ ಅಮ್ಮು ರೈ ಹರ್ಕಾಡಿ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ತಾಲೂಕು ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷೆ ಮಲ್ಲಿಕಾ ಶೆಟ್ಟಿ, ವಲಯ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪ್ರಶಾಂತ್ ಜೈನ್, ಬಂಟ್ವಾಳ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕುಲಾಲ್, ಪಾಣೆಮಂಗಳೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹಿಂ ನವಾಝ್, ಚೆನ್ನೈತ್ತೂಡಿ ವಲಯ ಕಾಂಗ್ರೆಸ್ ಸಮಿತಿ ಅಧ್ಯಕ್ಷ ನವೀನ್ ಚಂದ್ರ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ಸಮಿತಿ ಅಧ್ಯಕ್ಷ ಗಂಗಯ್ಯ ಡಿ.ಎನ್., ಗ್ರಾಮ ಪಂಚಾಯತ್ ಮಾಜಿ ಸದಸ್ಯ ಅನಂತ್ ಪೈ, ನಿವ್ರತ ಸಹಕಾರಿ ಪ್ರಬಂಧಕ ಮೋಹನ್ ಹೆಗ್ಡೆ, ಯುವ ಕಾಂಗ್ರೆಸ್ ಅಧ್ಯಕ್ಷ ಹೈದರ್, ಚೆನ್ನೈತ್ತೋಡಿ ಯುವ ಕಾಂಗ್ರೆಸ್ ಅಧ್ಯಕ್ಷ ರವಿಕಿರಣ್ ಪಾಂಗಲ್ಪಾಡಿ, ಬೆಳ್ತಂಗಡಿ ತಾಲೂಕು ಪಾಲಿಕೆ ಸಮಾಜ ಸಮಿತಿ ಅಧ್ಯಕ್ಷ ಎಸ್.ಪ್ರಭಾಕರ, ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಗುರುಪ್ರಸಾದ್ ಶೆಟ್ಟಿ, ಶಬೀರ್ ಕಲಾಬಾಗಿಲು, ಗ್ರಾಮ ಪಂಚಾಯತ್ ಮಾಜಿ ಸದಸ್ಯ ಪ್ರಶಾಂತ್ ಕುಮಾರ್ ಕೋಟ್ಯಾನ್ ಮಠ, ಪದ್ಮನಾಭ ಶೆಟ್ಟಿ, ಮತ್ತು ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹಬೀಬ್ ಅಬ್ದುಲ್ ಕದೀರ್ ಮೊದಲಾದವರು ಉಪಸ್ಥಿತರಿದ್ದರು.

ಶಾಲಾ ಸಂಚಾಲಕ ಶೇಖ್ ರಹ್ಮತ್ತುಲ್ಲಾಹ್ ಸ್ವಾಗತಿಸಿ, ರಾಜೀವ್ ಕಕ್ಕೆಪದವು ವಂದಿಸಿದರು. ಶಿಕ್ಷಕಿ ಎಲ್ಸಿ ಲಸ್ರಾದೊ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News