ಬೀಫ್ ಮಾರಾಟ ಮಾಡಿದ ವ್ಯಕ್ತಿಯ ಮೇಲೆ ರಾಷ್ಟ್ರೀಯ ಭದ್ರತಾ ಕಾಯಿದೆ ಹೇರಿದ ಪೊಲೀಸರು

Update: 2020-09-14 13:02 GMT

ಇಂದೋರ್ : ಮಧ್ಯ ಪ್ರದೇಶದ ಇಂದೋರ್ ನಗರದಲ್ಲಿ ಅಕ್ರಮವಾಗಿ ಗೋಮಾಂಸ ಮಾರಾಟ ಮಾಡಿದ ಆರೋಪ ಹೊತ್ತ 39 ವರ್ಷದ ವ್ಯಕ್ತಿಯ ಮೇಲೆ ಕಠಿಣ ರಾಷ್ಟ್ರೀಯ ಭದ್ರತಾ ಕಾಯಿದೆ ಹೇರಲಾಗಿದೆ.

ಇಲ್ಲಿನ ರಾವೋಜಿ ಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯ ಸೌತ್ ಟೋಡ ಪ್ರದೇಶದಲ್ಲಿನ ಅಂಗಡಿಯೊಂದರಲ್ಲಿ ಗೋಮಾಂಸ ಮಾರಾಟ ಮಾಡುತ್ತಿದ್ದಾಗ ದಾಳಿ ನಡೆಸಿ ಆತನನ್ನು ಬಂಧಿಸಲಾಗಿತ್ತು. ಗೋಮಾಂಸವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆ ಮಳಿಗೆಯಲ್ಲಿ ಆಡಿನ ಮಾಂಸ ಮಾರಾಟ ಮಾಡಲು ಮಾತ್ರ ಅನುಮತಿಯಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಎಲ್ಲಿಂದ ಬೀಫ್ ತರಿಸುತ್ತಿದ್ದ ಹಾಗೂ ಯಾರಿಗೆ ಮಾರಾಟ ಮಾಡುತ್ತಿದ್ದ ಎಂಬ ಕುರಿತು ತನಿಖೆ ನಡೆಸಲಾಗುವುದು ಎಂದು  ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News