ಮಂಗಳೂರು: ಬೈಕ್‌ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ಮಹಿಳೆ ಸ್ಥಳದಲ್ಲೇ ಸಾವು

Update: 2020-09-14 14:20 GMT

ಬಂಟ್ವಾಳ: ಮಹಿಳೆಯೊಬ್ಬರು ರಸ್ತೆ ದಾಟುತ್ತಿದ್ದ ವೇಳೆ ಬೈಕ್‌ ಢಿಕ್ಕಿಯಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಂಗಳೂರು ಹೊರವಲಯದ ಅಡ್ಯಾರು ಕಟ್ಟೆಯಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಅಳಪೆ ಪಡೀಲ್‌ ನಿವಾಸಿ ಮಾಲತಿ (48) ಮೃತ ಮಹಿಳೆ ಎಂದು ಗುರುತಿಸಲಾಗಿದೆ.

ಬಸ್ ನಿಂದ ಇಳಿದ ಮಹಿಳೆ ಅಡ್ಯಾರ್ ನಲ್ಲಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಫರಂಗಿಪೇಟೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಬೈಕ್‌ ಮಹಿಳೆಗೆ ಢಿಕ್ಕಿ ಹೊಡೆದಿದೆ ಎನ್ನಲಾಗುತ್ತಿದೆ.

ಬೈಕ್‌ ಚಾಲಕನಿಗೆ ಹಾಗೂ ಹಿಂಬದಿ ಸವಾರರಾದ ಬೈಕ್‌ ಚಾಲಕನ ಪತ್ನಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಈ ಬಗ್ಗೆ ನಾಗುರಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News