ಕೊರೋನ: ಯುರೋಪ್‌ನಲ್ಲಿ ಅಕ್ಟೋಬರ್, ನವೆಂಬರ್‌ನಲ್ಲಿ ಹೆಚ್ಚಿನ ಸಾವು

Update: 2020-09-14 18:13 GMT

ಕೋಪನ್‌ಹೇಗನ್ (ಡೆನ್ಮಾರ್ಕ್), ಸೆ. 14: ಯುರೋಪ್‌ನಲ್ಲಿ ಕೋವಿಡ್-19 ಸಾಂಕ್ರಾಮಿಕದಿಂದಾಗಿ ದಿನವೊಂದರಲ್ಲಿ ಸಾಯುವವರ ಸಂಖ್ಯೆ ಅಕ್ಟೋಬರ್ ಮತ್ತು ನವೆಂಬರ್‌ನಲ್ಲಿ ಏರಿಕೆಯಾಗಲಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ನಿರೀಕ್ಷಿಸಿದೆ ಎಂದು ಸಂಸ್ಥೆಯ ಯುರೋಪ್ ಶಾಖೆಯ ಮುಖ್ಯಸ್ಥರು ಹೇಳಿದ್ದಾರೆ.

ಯುರೋಪ್‌ನಲ್ಲಿ, ಅದರಲ್ಲೂ ಮುಖ್ಯವಾಗಿ ಸ್ಪೇನ್ ಮತ್ತು ಫ್ರಾನ್ಸ್‌ನಲ್ಲಿ ವರದಿಯಾಗುತ್ತಿರುವ ಕೊರೋನ ವೈರಸ್ ಸೋಂಕು ಪ್ರಕರಣಗಳ ಸಂಖ್ಯೆ ಇತ್ತೀಚಿನ ವಾರಗಳಲ್ಲಿ ಗಣನೀಯವಾಗಿ ಹೆಚ್ಚಿದೆ. ವಿಶ್ವ ಆರೋಗ್ಯ ಸಂಸ್ಥೆಯ ಯುರೋಪ್ ಶಾಖೆಯು ನಿಗಾ ಇಟ್ಟಿರುವ 55 ದೇಶಗಳಲ್ಲಿ ಶುಕ್ರವಾರ ಒಂದೇ ದಿನ 51,000ಕ್ಕೂ ಅಧಿಕ ಹೊಸ ಸೋಂಕು ಪ್ರಕರಣಗಳು ವರದಿಯಾಗಿವೆ. ಇದು ಎಪ್ರಿಲ್‌ನಲ್ಲಿ ಕೊರೋನ ವೈರಸ್ ಸಾಂಕ್ರಾಮಿಕದ ಉತ್ತುಂಗ ಅವಧಿಯಲ್ಲಿ ವರದಿಯಾಗಿರುವ ಪ್ರಕರಣಗಳಿಗಿಂತಲೂ ಹೆಚ್ಚಾಗಿದೆ ಎಂದು ಡಬ್ಲ್ಯುಎಚ್‌ಒ ತಿಳಿಸಿದೆ.

‘‘ಪರಿಸ್ಥಿತಿಯು ಇನ್ನಷ್ಟು ಕಠಿಣವಾಗಲಿದೆ. ಅಕ್ಟೋಬರ್ ಮತ್ತು ನವೆಂಬರ್‌ನಲ್ಲಿ ನಾವು ಹೆಚ್ಚಿನ ಸಂಖ್ಯೆಯ ಸಾವುಗಳನ್ನು ನೋಡಲಿದ್ದೇವೆ’’ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಯುರೋಪ್ ನಿರ್ದೇಶಕ ಹ್ಯಾನ್ಸ್ ಕ್ಲಗ್ ಅಭಿಪ್ರಾಯಪಟ್ಟರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News