ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆಗೆ ಸಮನಾಗಿ ವಿಶ್ವೇಶ್ವರಯ್ಯ ಪ್ರತಿಮೆ ನಿರ್ಮಾಣ ಮಾಡಿದರೆ ತಪ್ಪೇನು: ರಾಜೀವ್

Update: 2020-09-15 09:38 GMT

ಮೈಸೂರು, ಸೆ.15: ಭಾರತ ರತ್ನ ದೊಡ್ಡದೆ ಹಾಗಾಗಿ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ  ನಿರ್ಮಾಣ ಸಮನಾಗಿ ವಿಶ್ವೇಶ್ವರಯ್ಯ ಪ್ರತಿಮೆ ನಿರ್ಮಾಣ ಮಾಡಿದರೆ ತಪ್ಪೇನಿಲ್ಲ ಎಂದು ನೂತನ ಮುಡಾ ಅಧ್ಯಕ್ಷ ಎಚ್.ವಿ.ರಾಜೀವ್ ಹೇಳಿದ್ದಾರೆ.

ನಗರದ ಮುಡಾ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಮುಡಾ ಸಭೆಯಲ್ಲಿ ತೀರ್ಮಾನಗೊಂಡ ವಿವರಗಳನ್ನು ನೀಡಲು ಮಂಗಳವಾರ ಮುಡಾ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡುತ್ತಿದ್ದರು.

ಇಂದು ಇಂಜಿನಿಯರ್ಸ್ ದಿನಾಚರಣೆ ಹಾಗಾಗಿ ಕೆ.ಆರ್.ಎಸ್ ಗೆ ತೆರಳಿ ವಿಶ್ವೇಶ್ವರಯ್ಯ ಅವರ ಪುತ್ಥಳಿಗೆ ಗೌರವ ಸಲ್ಲಿಸಿ ಬಂದಿದ್ದೇನೆ. ವಿಶ್ವೇಶ್ವರಯ್ಯ ಈ ರಾಷ್ಟ್ರಕ್ಕೆ ಅಪಾರ ಕೊಡುಗೆಯನ್ನು ನೀಡಿದ್ದಾರೆ. ಕನ್ನಂಬಾಡಿ ಕಟ್ಟೆಯ ನಿರ್ಮಾತೃ ವಿಶ್ವೇಶ್ವರಯ್ಯ. ಕನ್ನಂಬಾಡಿ ಕಟ್ಟೆ ಕಟ್ಟಲು 80 ಅಡಿಗಳಿಗಷ್ಟೇ ಅನುಮತಿ ನೀಡಲಾಗಿತ್ತು. ಆದರೆ ಸರ್ ಎಂ.ವಿಶ್ವೇಶ್ವರಯ್ಯ ಅವರ ದೂರದೃಷ್ಟಿಯಿಂದ 124 ಅಡಿಗಳಿಗೆ ವಿಸ್ತರಿಸಲಾಯಿತು. ಅಂದಿನ ಬ್ರಿಟಿಷ್ ಸರ್ಕಾರ ಇದಕ್ಕೆ ವಿರೋಧ ವ್ಯಕ್ತಪಡಿಸಿತ್ತು. ಆದರೆ ಸರ್ ಎಂ.ವಿಶ್ವೇಶ್ವರಯ್ಯ ಅವರು ಬ್ರಿಟಿಷರ ಮನವೊಲಿಸಿ 124 ಅಡಿಗಳಿಗೆ ಕೆ.ಆರ್.ಎಸ್ ಡ್ಯಾಮ್ ಕಟ್ಟಿ ಸಾವಿರಾರು ಎಕರೆಗೆ ನೀರು ಹರಿಯುವಂತೆ ಮಾಡಿದರು. ಜೊತೆಗೆ ಮದ್ರಾಸ್ ಸರ್ಕಾರದಲ್ಲಿ ಮೂರು ವರ್ಷ ಸೇವೆ ಸಲ್ಲಿಸಿ ಹಲವು ಜನಪರ ಕೆಲಸಗಳನ್ನು ಮಾಡಿದ್ದಾರೆ ಎಂದರು.

ಸರ್ ಎಂ.ವಿಶ್ವೇಶ್ವರಯ್ಯ ಅವರ ಕೊಡುಗೆ ಸಾಕಷ್ಟಿದ್ದರೂ ಮೈಸೂರಿನ ಅಂದಿನ ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಸರಿಸಮಾನವಾಗಿ  ಸರ್.ಎಂ.ವಿಶ್ವೇಶ್ವರಯ್ಯ ಪ್ರತಿಮೆ ನಿರ್ಮಾಣ ಸರಿಯಲ್ಲ ಎಂದು ಪ್ರತಿಭಟನೆಗಳು ನಡೆಯುತ್ತಿವೆಯಲ್ಲ ಎಂಬ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಅವರು, ವಿಶ್ವೇಶ್ವರಯ್ಯ ಬಹಳ ದೊಡ್ಡ ವ್ಯಕ್ತಿ ಅವರಿಗೆ ಭಾರತ ರತ್ನ ಪ್ರಶಸ್ತಿ ಲಭಿಸಿದೆ. ಹಾಗಾಗಿ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆಗೆ ಸರಿಸಮಾನವಾಗಿ ಪ್ರತಿಮೆ ನಿರ್ಮಾಣ ಆದರೆ ತಪ್ಪೇನು ಇಲ್ಲ, ವಿಶ್ವೇಶ್ವರಯ್ಯ ಅವರನ್ನು ನೋಡುವ ದೃಷ್ಟಿ ಬದಲಾಗಬೇಕು ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News