×
Ad

ಡ್ರಗ್ಸ್ ದಂಧೆ ಆರೋಪ: ನಟ ದಿಗಂತ್- ಐಂದ್ರಿತಾ ದಂಪತಿಗೆ ಸಿಸಿಬಿ ನೋಟಿಸ್

Update: 2020-09-15 19:28 IST
Photo : INSTAGRAM

ಬೆಂಗಳೂರು, ಸೆ.15: ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ ಆರೋಪ ಪ್ರಕರಣ ಸಂಬಂಧ ನಟ ದಿಗಂತ್ ಹಾಗೂ ಪತ್ನಿ ಐಂದ್ರಿತಾ ರೇ ಅವರಿಗೆ ಸಿಸಿಬಿ ನೋಟಿಸ್ ಜಾರಿ ಮಾಡಿದ್ದು, ನಾಳೆ(ಸೆ.16) ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.

ಪ್ರಕರಣದಲ್ಲಿ ಬಂಧಿತ ಆರೋಪಿಗಳ ಪೈಕಿ ಕೆಲ ಮಂದಿಯೊಂದಿಗೆ ಸಂಪರ್ಕ ಹೊಂದಿರುವ ಆರೋಪ ಕೇಳಿಬಂದಿದ್ದು, ಪ್ರಾಥಮಿಕ ವಿಚಾರಣೆಗಾಗಿ ಈ ಇಬ್ಬರಿಗೆ ನೋಟಿಸ್ ನೀಡಿ, ಬುಧವಾರ ಬೆಳಗ್ಗೆ 11 ಗಂಟೆಗೆ ಸಿಸಿಬಿ ಕಚೇರಿಗೆ ಹಾಜರಾಗುವಂತೆ ಸೂಚಿಸಲಾಗಿದೆ ಎಂದು ತನಿಖಾಧಿಕಾರಿಯೊಬ್ಬರು ಮಾಹಿತಿ ನೀಡಿದರು.

ಶ್ರೀಲಂಕಾದಲ್ಲಿ ಕ್ಯಾಸಿನೋ ವ್ಯವಹಾರ ನಡೆಸುತ್ತಿದ್ದ ಎನ್ನಲಾದ ಆರೋಪಿಯೊರ್ವ ಆಯೋಜಿಸುತ್ತಿದ್ದ ಪಾರ್ಟಿಯಲ್ಲಿ ಭಾಗಿಯಾಗಿರುವುದಾಗಿ ಐಂದ್ರಿತಾ ರೇ ಹೇಳಿಕೆ ನೀಡಿದ ವಿಡಿಯೋ ವೈರಲ್ ಆಗಿತ್ತು. ಈ ವಿಡಿಯೋ ಆಧರಿಸಿ ನೋಟಿಸ್ ಜಾರಿಯಾಗಿದೆ ಎನ್ನಲಾಗಿದೆ.

ನೋಟಿಸ್ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ದಿಗಂತ್ ತಾಯಿ ಮಲ್ಲಿಕಾ ಕೃಷ್ಣಮೂರ್ತಿ, ನನ್ನ ಪುತ್ರ, ಸೊಸೆ ಈ ರೀತಿಯ ಕೆಲಸಗಳಿಗೆ ಹೋಗುವುದಿಲ್ಲ. ಕೆಲವೊಂದು ಕಾರ್ಯಕ್ರಮಗಳಲ್ಲಿ ಭಾಗಿಯಾಗಿರಬಹುದು ಹೊರತು, ಯಾವುದೇ ಅಪರಾಧ ಚಟುವಟಿಕೆಗಳು ನಡೆಸುವುದಿಲ್ಲ. ಸದ್ಯ ಅವರು ಕೇರಳಕ್ಕೆ ಹೋಗಿದ್ದು, ನೋಟಿಸ್ ಬಗ್ಗೆ ಮಾಹಿತಿ ನೀಡುತ್ತೇನೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News