ಬೆಂಗಳೂರು: ಕೋವಿಡ್ ನಿಂದ ಮತ್ತೆ 41 ಮಂದಿ ಮೃತ್ಯು; ಸಾವಿನ ಸಂಖ್ಯೆ 2,514ಕ್ಕೆ ಏರಿಕೆ

Update: 2020-09-15 16:20 GMT

ಬೆಂಗಳೂರು, ಸೆ.14: ನಗರದಲ್ಲಿ ಮಂಗಳವಾರ 3,084 ಜನರಿಗೆ ಕೊರೋನ ಸೋಂಕು ದೃಢಪಟ್ಟಿದೆ. 3,889 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಸೋಂಕಿಗೆ 41 ಜನರು ಮೃತರಾಗಿದ್ದಾರೆ.

ನಗರದಲ್ಲಿ ಒಟ್ಟು 1,76,712 ಜನರಿಗೆ ಸೋಕು ದೃಢಪಟ್ಟಿದ್ದು, ಇಲ್ಲಿಯವರೆಗೆ 2,514 ಜನರು ಸೋಂಕಿಗೆ ಬಲಿಯಾಗಿದ್ದಾರೆ. 1,30,627 ಜನರು ಇಲ್ಲಿಯವರೆಗೆ ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳು ಒಳಗೊಂಡಂತೆ 39,681 ಕೊರೋನ ಸೋಂಕಿತರು ಸಕ್ರಿಯವಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿರುವ 150 ಜ್ವರಚಿಕಿತ್ಸಾಲಯದಲ್ಲಿ ಒಟ್ಟು 2,25,141 ವ್ಯಕ್ತಿಗಳಿಗೆ ತಪಾಸಣೆ ಮಾಡಲಾಗಿದೆ.

ಸೋಮವಾರದ ಬಿಬಿಎಂಪಿ ಕೋವಿಡ್ ವರದಿಯಲ್ಲಿ ನಗರದಲ್ಲಿ ಒಟ್ಟು ಸಕ್ರಿಯ 15,806 ಕಂಟೈನ್ಮೆಂಟ್ ಝೋನ್‍ಗಳಿವೆ. ಇದುವರೆಗೂ 30,928 ಕಂಟೈನ್ಮೆಂಟ್ ಝೋನ್‍ಗಳನ್ನು ಗುರುತಿಸಲಾಗಿದೆ.

ನಗರದಲ್ಲಿ ಒಟ್ಟು 4,78,162 ಪ್ರಾಥಮಿಕ ಸಂಪರ್ಕಿತರನ್ನು ಗುರುತಿಸಲಾಗಿದ್ದು, ದ್ವಿತೀಯ ಸಂಪರ್ಕಿತ 5,93,633 ಜನರನ್ನು ಗುರುತಿಸಲಾಗಿದೆ. ನಗರದಲ್ಲಿ 12,35,880 ಜನರಿಗೆ ಕೊರೋನ ಪರೀಕ್ಷೆ ನಡೆಸಲಾಗಿದ್ದು, ಇದರಲ್ಲಿ ಪಾಸಿಟಿವ್ ಪ್ರಮಾಣ ಶೇ.14.05ರಷ್ಟಿದೆ. ಕೊರೋನ ಸೋಂಕಿಗೆ ಮೃತರಾಗುತ್ತಿರುವ ಪ್ರಮಾಣ ಶೇ.1.42ರಷ್ಟಿದ್ದು, ಗುಣಮುಖರಾಗುತ್ತಿರುವ ಪ್ರಮಾಣ ಶೇ.75.23ರಷ್ಟಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News