ರಂಗಕರ್ಮಿ ತೋ.ನಂ.ನಂಜುಂಡಸ್ವಾಮಿ ನಿಧನ

Update: 2020-09-15 16:43 GMT

ಬೆಂಗಳೂರು, ಸೆ.15: ಹೃದಯ ಹಾಗೂ ಯಕೃತ್ತು ಸಮಸ್ಯೆಯಿಂದ ಬಳಲುತ್ತಿದ್ದ ನಿರ್ದೇಶಕ, ರಂಗಕರ್ಮಿ ತೋ.ನಂ.ನಂಜುಂಡಸ್ವಾಮಿ(71) ಅವರು ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ನಿಧನರಾಗಿದ್ದಾರೆ.

ಆರೋಗ್ಯ ಸಮಸ್ಯೆ ಗಂಭೀರ ಸ್ವರೂಪ ಪಡೆದ ಕಾರಣ ಚಿಕಿತ್ಸೆಗಾಗಿ ನಗರದ ಜಯದೇವ ಹೃದ್ರೋಗ ಸಂಸ್ಥೆಯಲ್ಲಿ ದಾಖಲಾಗಿದ್ದರು. 10 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರು ಮಂಗಳವಾರ ಬೆಳಗ್ಗೆ 7.50ಕ್ಕೆ ಆಸ್ಪತ್ರೆಯಲ್ಲಿಯೇ ಮೃತಪಟ್ಟಿದ್ದಾರೆ. ಪತ್ನಿ, ಓರ್ವ ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ಬಂಡೇಮಠ ಚಿತಾಗಾರದಲ್ಲಿ ಅವರ ಅಂತ್ಯಸಂಸ್ಕಾರ ನೇರವೇರಿತು ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.

ನಂಜುಂಡಸ್ವಾಮಿ ಅವರು ನಾಟಕ ರಚನೆ, ನಿರ್ದೇಶನ, ರಂಗ ಸಂಘಟನೆಗಳಲ್ಲಿ ತೊಡಗಿಸಿಕೊಳ್ಳುವ ಜತೆಗೆ ಗ್ರಾಮೀಣ ರಂಗಭೂಮಿಯ ಬೆಳವಣಿಗೆಗೆ ಅಪಾರ ಕೊಡುಗೆ ನೀಡಿದ್ದರು. ಕರ್ನಾಟಕ ನಾಟಕ ಅಕಾಡಮಿಯ ರಂಗ ಕಲಾವಿದರ ವಿವಿಧೋದ್ದೇಶ ಸಹಕಾರ ಸಂಘದ ಸ್ಥಾಪಕರೂ ಆಗಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News