ಕೊರೋನ: ಸೆಪ್ಟಂಬರ್-ಡಿಸೆಂಬರ್ ಅವಧಿ ಯುರೋಪ್‌ಗೆ ಮಾರಕ

Update: 2020-09-15 17:51 GMT

ಕೋಪನ್‌ಹೇಗನ್ (ಡೆನ್ಮಾರ್ಕ್), ಸೆ. 15: ಸೆಪ್ಟಂಬರ್‌ನಿಂದ ಡಿಸೆಂಬರ್ ತಿಂಗಳ ಅವಧಿಯಲ್ಲಿ ಯುರೋಪ್‌ನಲ್ಲಿ ಕೊರೋನ ವೈರಸ್‌ನಿಂದ ಸಾಯುವವರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಏರಲಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಸೋಮವಾರ ಎಚ್ಚರಿಸಿದೆ.

ಜಗತ್ತಿನಾದ್ಯಂತ ಕೊರೋನ ವೈರಸ್ ಸೋಂಕು ಪ್ರಕರಣಗಳ ಸಂಖ್ಯೆಯಲ್ಲಿ ದಾಖಲೆಯ ಏರಿಕೆಯಾದ ಬಳಿಕ ಸಂಸ್ಥೆಯು ಈ ಎಚ್ಚರಿಕೆ ನೀಡಿದೆ.

ಕೊರೋನ ವೈರಸ್ ಸೋಂಕು ಪ್ರಕರಣಗಳ ಸಂಖ್ಯೆಯಲ್ಲಿ ತೀವ್ರ ಏರಿಕೆ ದಾಖಲಾದ ಬೆನ್ನಿಗೇ, ಇಸ್ರೇಲ್ ಶುಕ್ರವಾರದಿಂದ ಮೂರು ವಾರಗಳ ಹೊಸ ಲಾಕ್‌ಡೌನ್ ಘೋಷಿಸಿದೆ.

‘‘ಪರಿಸ್ಥಿತಿ ಹದಗೆಡಲಿದೆ. ಅಕ್ಟೋಬರ್, ನವೆಂಬರ್‌ನಲ್ಲಿ ಹೆಚ್ಚಿನ ಪ್ರಮಾಣದ ಸಾವನ್ನು ನಾವು ನೋಡಲಿದ್ದೇವೆ’’ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಯುರೋಪ್ ನಿರ್ದೇಶಕ ಹ್ಯಾನ್ಸ್ ಕ್ಲೂಗ್ ಎಎಫ್‌ಪಿ ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನವೊಂದರಲ್ಲಿ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News