ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ: ಸೆ.20ರಂದು ಲಿಖಿತ ಪರೀಕ್ಷೆ

Update: 2020-09-16 16:12 GMT

ಉಡುಪಿ, ಸೆ.16: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ನಾಗರಿಕ ಪೊಲೀಸ್ ಕಾನ್‌ಸ್ಟೇಬಲ್ ಹಾಗೂ ಮಹಿಳಾ ಕಾನ್‌ಸ್ಟೇಬಲ್ ಹುದ್ದೆಗಳ ನೇಮಕಾತಿಗಾಗಿ ಲಿಖಿತ ಪರೀಕ್ಷೆಯು ಇದೇ ಸೆ.20ರಂದು ಜಿಲ್ಲೆಯ ಉಡುಪಿ ಮತ್ತು ಮಣಿಪಾಲ ಪರಿಸರದ ಒಂಭತ್ತು ವಿದ್ಯಾಸಂಸ್ಥೆಗಲ್ಲಿ ನಡೆಯಲಿದೆ.

ಉಡುಪಿಯ ಪೂರ್ಣಪ್ರಜ್ಞ ಪದವಿ ಕಾಲೇಜು, ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜು, ಉಡುಪಿಯ ಎಂಜಿಎಂ ಪದವಿ ಕಾಲೇಜು, ಎಂಜಿಎಂ ಪದವಿ ಪೂರ್ವ ಕಾಲೇಜು, ಅಜ್ಜರಕಾಡಿನ ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು, ವಾದಿರಾಜ ರಸ್ತೆಯ ವಿದ್ಯೋದಯ ಪದವಿ ಪೂರ್ವ ಕಾಲೇಜು, ಸರಕಾರಿ ಪದವಿ ಪೂರ್ವ ಕಾಲೇಜು-ಬೋರ್ಡ್ ಹೈಸ್ಕೂಲ್- ಉಡುಪಿ, ವೌಂಟ್ ರೋಸರಿ ಇಂಗ್ಲೀಷ್ ಮೀಡಿಯಮ್ ಸ್ಕೂಲ್ ಕಲ್ಯಾಣಪುರ ಸಂತೆಕಟ್ಟೆ, ಮಣಿಪಾಲದ ಅನಾಟಮಿ ಬ್ಲಾಕ್ ಬಳಿ ಇರುವ ಕೆಎಂಸಿ ಇಂಟರ್ಯಾಕ್ಟ್ ಹಾಲ್ ಕೇಂದ್ರ ಗಳಲ್ಲಿ ಈ ಪರೀಕ್ಷೆ ನಡೆಯಲಿದೆ.

ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗುವಾಗ ಪ್ರವೇಶ ಪತ್ರ, ಗುರುತಿನ ಚೀಟಿ ಹಾಗೂ ಕಡ್ಡಾಯವಾಗಿ ಮಾಸ್ಕ್ ಧರಿಸಿಕೊಂಡು, ನೀರಿನ ಬಾಟಲಿಯೊಂದಿಗೆ ಪರೀಕ್ಷಾ ಕೇಂದ್ರಕ್ಕೆ ಬರುವಂತೆ ಸೂಚಿಸಲಾಗಿದೆ. ಲಿಖಿತ ಪರೀಕ್ಷೆಯ ಬಗ್ಗೆ ಹೆಚ್ಚಿನ ಮಾಹಿತಿ ಮತ್ತು ಲಿಖಿತ ಪರೀಕ್ಷೆಯ ಪ್ರವೇಶ ಪತ್ರಕ್ಕಾಗಿ ಇಲಾಖೆಯ ಅಧಿಕೃತ ವೆಬ್‌ಸೈಟ್ -www.ksp.gov.in -ನ್ನು ಪರಿಶೀಲಿಸುವಂತೆ ಜಿಲ್ಲಾ ಪೊಲೀಸ್ ಅಧೀಕ್ಷಕರ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News