'ಬಿಎಸ್ಸಿ ಅಗ್ರಿ ಪ್ರವೇಶ ಪರೀಕ್ಷೆ ರದ್ದು' ಸುದ್ದಿ ಬಗ್ಗೆ ಸಚಿವ ಬಿ.ಸಿ ಪಾಟೀಲ್ ಸ್ಪಷ್ಟನೆ

Update: 2020-09-16 16:24 GMT

ಕಲಬುರಗಿ, ಸೆ.16: ಬಿಎಸ್ಸಿ ಅಗ್ರಿ ಪ್ರವೇಶ ಪರೀಕ್ಷೆ ರದ್ದು ಮಾಡಲಾಗಿದೆ ಎಂದು ತಪ್ಪು ಪ್ರಚಾರ ಮಾಡಲಾಗುತ್ತಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಸ್ಪಷ್ಟನೆ ನೀಡಿದರು.

ನಗರದ ಕೃಷಿ ಮಹಾವಿದ್ಯಾಲಯದಲ್ಲಿ ಕೃಷಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಿಎಸ್ಸಿ ಅಗ್ರಿ ಪ್ರವೇಶ ಪರೀಕ್ಷೆ ರದ್ದು ಮಾಡಲಾಗಿದೆ ಎಂದು ಸುಳ್ಳು ವದಂತಿ ಹಬ್ಬಿಸಲಾಗಿದೆ ಎಂದರು.

ಕೊರೋನ ಕಾರಣದಿಂದಾಗಿ ಪರೀಕ್ಷೆ ನಡೆಸಲಾಗಿಲ್ಲ. 1.50 ಲಕ್ಷ ಅಭ್ಯರ್ಥಿಗಳಿದ್ದು, ಪರೀಕ್ಷೆ ಬರೆಯೋದು ಕಷ್ಟವಾಗುತ್ತದೆ. ಹೀಗಾಗಿ ಪರೀಕ್ಷೆ ಮುಂದೂಡಲಾಗಿದೆ. ಶೇ.40 ರಷ್ಟು ಸೀಟುಗಳು ರೈತರ ಮಕ್ಕಳಿಗೆ ಮೀಸಲು ಎಂದರು.

ಕೊಪ್ಪಳ ಜಿಲ್ಲೆಯಲ್ಲಿ ಪ್ರಾಯೋಗಿಕವಾಗಿ ಮೊಬೈಲ್ ಲ್ಯಾಬ್ ಆರಂಭಿಸಲಾಗುತ್ತಿದೆ. ಅದರ ಯಶಸ್ಸನ್ನು ಆಧರಿಸಿ ರಾಜ್ಯದ ಇತರೆ ಜಿಲ್ಲೆಗಳಿಗೂ ವಿಸ್ತರಿಸಲಾಗುವುದು ಎಂದು ಪಾಟೀಲ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News