ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಸರಕಾರ ಬದ್ಧ: ಸಿಎಂ ಯಡಿಯೂರಪ್ಪ

Update: 2020-09-17 05:06 GMT

ಕಲಬುರಗಿ, ಸೆ.17: ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ನಮ್ಮ ಸರಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

‘ಕಲ್ಯಾಣ ಕರ್ನಾಟಕ ಉತ್ಸವ’ದ ಪ್ರಯುಕ್ತ ಗುರುವಾರ ಬೆಳಗ್ಗೆ ನಗರದ ಸರ್ದಾರ್ ವಲ್ಲಭ ಭಾಯ್ ಪಟೇಲ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಧ್ವಜಾರೋಹಣ ನೆರವೇರಿಸಿ ನಂತರ ಪೊಲೀಸ್‌ ಡಿಎಆರ್‌ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಂಡರು.

ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಹಾಗೂ ಕಲಬುರ್ಗಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ, ಕೆಕೆಆರ್ ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ್ ರೇವೂರ್, ಎನ್.ಇ‌.ಕೆ.ಎಸ್.ಆರ್.ಟಿ.ಸಿ. ಅಧ್ಯಕ್ಷ ರಾಜಕುಮಾರ ಪಾಟೀಲ ತೇಲ್ಕೂರ, ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಮತ್ತು ಸಾಂಸ್ಕೃತಿಕ ಸಂಘದ ಅಧ್ಯಕ್ಷ ಹಾಗೂ ಮಾಜಿ ಸಂಸದ ಡಾ. ಬಸವರಾಜ ಪಾಟೀಲ ಸೇಡಂ, ಸಂಸದ ಡಾ.ಉಮೇಶ ಜಾಧವ್, ಶ್ರೀ ನಿಜಶರಣ ಅಂಬಿಗರ ಚೌಡಯ್ಯ ನಿಗಮದ ಅಧ್ಯಕ್ಷ ಬಾಬುರಾವ್ ಚಿಂಚನಸೂರ್, ಶಾಸಕರಾದ ಬಸವರಾಜ್ ಮತ್ತಿಮೂಡ ಡಾ.ಅವಿನಾಶ್ ಜಾಧವ್, ವಿಧಾನ ಪರಿಷತ್ತಿನ ಶಾಸಕ  ಬಿ.ಜಿ. ಪಾಟೀಲ್ ಉಪಸ್ಥಿತರಿದ್ದರು.

ಹೈದರಾಬಾದ್‌ ಕರ್ನಾಟಕ’ ಪ್ರದೇಶಕ್ಕೆ ‘ಕಲ್ಯಾಣ ಕರ್ನಾಟಕ’ ಎಂದು ರಾಜ್ಯ ಸರ್ಕಾರ ಮರು ನಾಮಕರಣ ಮಾಡಿ ಒಂದು ವರ್ಷವಾಗಿದೆ. ‘ಹೈದರಾಬಾದ್‌ ಕರ್ನಾಟಕ ವಿಮೋಚನಾ ದಿನ’ವನ್ನು ‘ಕಲ್ಯಾಣ ಕರ್ನಾಟಕ ಉತ್ಸವ’ವನ್ನಾಗಿ ಆಚರಿಸಲಾಗುತ್ತಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News