ಜಮ್ಮು-ಕಾಶ್ಮೀರ: ಎನ್‌ಕೌಂಟರ್‌ನಲ್ಲಿ ಮೂವರು ಉಗ್ರರು ಹತ

Update: 2020-09-17 05:38 GMT

ಶ್ರೀನಗರ,ಸೆ.17: ನಗರದ ಬಟಮಲೂ ಪ್ರದೇಶದಲ್ಲಿ ಗುರುವಾರ ನಡೆದ ಗುಂಡಿನ ಕಾಳಗದಲ್ಲಿ ಮೂವರು ಉಗ್ರರು ಹಾಗೂ ಓರ್ವ ನಾಗರಿಕ ಮಹಿಳೆ ಹತರಾದರೆ, ಓರ್ವ ಅಧಿಕಾರಿ ಸೇರಿದಂತೆ ಇಬ್ಬರು ಸಿಆರ್‌ಪಿಎಫ್ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಉಗ್ರರು ನೆಲೆಸಿದ್ದಾರೆ ಎಂಬ ಮಾಹಿತಿಯ ಮೇರೆಗೆ ಭದ್ರತಾ ಪಡೆಗಳು ಬಟಮಲೂ ಪ್ರದೇಶದ ಫಿರ್ದೌಸಾಬಾದ್ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಯನ್ನು ಸುಮಾರು 2:30ರಿಂದ ಆರಂಭಿಸಿತ್ತು. ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ ಬಳಿಕ ಶೋಧ ಕಾರ್ಯಾಚರಣೆಯು ಎನ್‌ಕೌಂಟರ್ ಆಗಿ ಬದಲಾಯಿತು. ಗುಂಡಿನ ದಾಳಿಯಲ್ಲಿ ಓರ್ವ ಸ್ಥಳೀಯ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಅಧಿಕಾರಿಯು ಸೇರಿದಂತೆ ಸಿಆರ್‌ಪಿಎಫ್‌ನ ಇಬ್ಬರು ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗಾಯಗೊಂಡ ಸಿಬ್ಬಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಹಾಗೂ ಉಗ್ರರ ವಿರುದ್ದ ಕಾರ್ಯಾಚರಣೆಯು ಮುಂದುವರಿದಿದೆ ಎಂದು ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News