ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ಆರೋಗ್ಯ ಸ್ಥಿತಿ ಗಂಭೀರ: ವೈದ್ಯರು, ಕುಟುಂಬಸ್ಥರ ಹೇಳಿಕೆ

Update: 2020-09-17 14:18 GMT

ಬೆಂಗಳೂರು, ಸೆ. 17: ನಾಲ್ಕು ತಿಂಗಳ ಹಿಂದೆಯೆಷ್ಟೇ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದ ಅಶೋಕ್ ಗಸ್ತಿ ಅವರಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ರಾಯಚೂರು ಜಿಲ್ಲೆಯ ಲಿಂಗಸಗೂರು ಮೂಲದ ಅಶೋಕ್ ಗಸ್ತಿ ಅವರಿಗೆ ಸೆ.2ರಂದು ಕೋವಿಡ್-19 ಸೋಂಕು ದೃಢಪಟ್ಟಿತ್ತು. ಆದರೆ, ಅವರಿಗೆ ಸೋಂಕಿನ ಯಾವುದೇ ಲಕ್ಷಣಗಳಿಲ್ಲದಿದ್ದರೂ ಅವರು ನಗರ ಮಣಿಪಾಲ್ ಆಸ್ಪತ್ರೆ ದಾಖಲಾಗಿದ್ದರು. ಹತ್ತು ದಿನಗಳ ಬಳಿಕ ಸೆ.12ರ ಹೊತ್ತಿಗೆ ಅವರ ಪರಿಸ್ಥಿತಿ ಗಂಭೀರವಾಗಿತ್ತು. ಆಸ್ಪತ್ರೆಯ ತುರ್ತುನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಸ್ಪತ್ರೆಯ ವೈದ್ಯರು ಸ್ಪಷ್ಟನೆ ನೀಡಿದ್ದಾರೆ.

ಸಾಮಾಜಿಕ ಜಾಲತಾಣ ಮತ್ತು ಮಾಧ್ಯಮಗಳಲ್ಲಿ ಅಶೋಕ್ ಗಸ್ತಿ ನಿಧನರಾಗಿದ್ದಾರೆಂಬ ವಂದತಿ ಹಬ್ಬಿದ್ದು, ಅಶೋಕ್ ಗಸ್ತಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ತುರ್ತುನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ಆಸ್ಪತ್ರೆಯ ವೈದ್ಯರು ಮತ್ತು ಕುಟುಂಬದ ಸದಸ್ಯರು ಸ್ಪಷ್ಟನೆ ನೀಡಿದ್ದಾರೆ. ಅಶೋಕ್ ಗಸ್ತಿ ಅವರ ಪತ್ನಿ ಹಾಗೂ ಪುತ್ರಿಗೂ ಕೋವಿಡ್ ಸೋಂಕು ದೃಢಪಟ್ಟಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News