ಉಡುಪಿ: ಸೆ.19ರಂದು ಮಹಿಳಾ ಕಾಂಗ್ರೆಸ್‌ನಿಂದ ಸರಕಾರಗಳ ವಿರುದ್ಧ ಪ್ರತಿಭಟನಾ ಸಭೆ

Update: 2020-09-17 14:21 GMT

ಉಡುಪಿ, ಸೆ.17: ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ಹಾಗೂ ಉಡುಪಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿ ಜಂಟಿ ಆಶ್ರಯದಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರಗಳ ವೈಫಲ್ಯಗಳ ವಿರುದ್ಧ ಬೃಹತ್ ಪ್ರತಿಭಟನಾ ಕಾರ್ಯಕ್ರಮ ಸೆ.19ರ ಶನಿವಾರ ಅಪರಾಹ್ನ 3 ಗಂಟೆಗೆ ನಡೆಯಲಿದೆ.

ಅಜ್ಜರಕಾಡಿನಲ್ಲಿರುವ ಹುತಾತ್ಮ ಸ್ಮಾರಕದ ಎದುರು ಈ ಬೃಹತ್ ಪ್ರತಿಭಟನೆ ನಡೆಯಲಿದೆ ಎಂದು ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ವಾಗ್ಳೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News