ಮಾದಕ ವಸ್ತುಗಳ ದಂಧೆ ಪ್ರಕರಣ: ನಿಷ್ಪಕ್ಷಪಾತ ತನಿಖೆಗೆ ಉಡುಪಿ ಜಿಲ್ಲಾ ಜನಜಾಗೃತಿ ವೇದಿಕೆ ಆಗ್ರಹ

Update: 2020-09-17 14:22 GMT

ಉಡುಪಿ, ಸೆ.17: ರಾಜ್ಯಾದ್ಯಂತ ಪಸರಿಸಿರುವ ಮಾದಕ ವಸ್ತುಗಳ ದಂಧೆ ಪ್ರಕರಣಗಳ ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಒತ್ತಾಯಿಸಿ ರಾಜ್ಯ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಉಡುಪಿ ಜಿಲ್ಲಾ ಜನಜಾಗೃತಿ ವೇದಿಕೆಯು ಉಡುಪಿ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಿದೆ.

ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಮಾದಕ ವಸ್ತುಗಳ ಆಕ್ರಮ ಮಾರಾಟವನ್ನು ಪತ್ತೆ ಹಚ್ಚಿ ತಪ್ಪಿತಸ್ಥರ ಮೇಲೆ ಪೋಲಿಸ್ ಇಲಾಖೆ ಕಟ್ಟು ನಿಟ್ಟಿನ ಕ್ರಮವನ್ನು ಕೈಗೊಳ್ಳಬೇಕು. ವಿಶೇಷವಾಗಿ ಯುವ ಸಮುದಾಯ ಈ ಪಿಡುಗಿ ನಿಂದ ದೂರವಿರುವಂತೆ ಜಾಗೃತಿ ಮೂಡಿಸಿ, ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ ವಾತಾವರಣ ಮೂಡಿಸುವಂತೆ ಮನವಿಯಲ್ಲಿ ವಿನಂತಿಸಲಾಗಿದೆ.

ಜಿಲ್ಲಾ ಜನಜಾಗೃತಿ ವೇದಿಕೆಯ ವತಿಯಿಂದ ಮನವಿಯನ್ನು ಅಪರ ಜಿಲ್ಲಾಧಿಕಾರಿ ಬಿ.ಸದಾಶಿವ ಪ್ರಭು ಅವರಿಗೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷ ನವೀನ್ ಅಮೀನ್ ಶಂಕರಪುರ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಪ್ರಾದೇಶಿಕ ನಿರ್ದೇಶಕ ವಸಂತ ಸಾಲ್ಯಾನ್, ಜಿಲ್ಲಾ ನಿರ್ದೇಶಕ ಗಣೇಶ್ ಬಿ., ರಾಜ್ಯ ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷ ದೇವದಾಸ್ ಹೆಬ್ಬಾರ್, ಜಿಲ್ಲಾ ನಿಕಟಪೂರ್ವ ಅಧ್ಯಕ್ಷ ಅಪ್ಪಣ್ಣ ಹೆಗ್ಡೆ, ಜಿಲ್ಲಾ ಸಮಿತಿ ಸದಸ್ಯರಾದ ಶಿವಕುಮಾರ್ ಅಂಬಲಪಾಡಿ, ಹರಿಶ್ಚಂದ್ರ ತೆಂಡುಲ್ಕರ್ ಮಾಳ, ಉದಯ ಕುಮಾರ್ ಹೆಗ್ಡೆ ಬೈಲೂರು ಹಾಗೂ ಯೋಜನೆಯ ಕಾರ್ಕಳ ಯೋಜನಾಧಿಕಾರಿ ಭಾಸ್ಕರ್ ವಿ. ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News