ಸ್ಯಾಂಡಲ್‍ವುಡ್ ಡ್ರಗ್ಸ್ ದಂಧೆ ಪ್ರಕರಣ: ಪ್ರಮುಖ ರೂವಾರಿಗಳ ಪತ್ತೆಗೆ ಮುಂದುವರಿದ ಶೋಧ

Update: 2020-09-17 14:45 GMT

ಬೆಂಗಳೂರು, ಸೆ.17: ಸ್ಯಾಂಡಲ್‍ವುಡ್ ಡ್ರಗ್ಸ್ ದಂಧೆ ಪ್ರಕರಣ ಸಂಬಂಧ ಪ್ರಮುಖ ರೂವಾರಿಗಳ ಬಂಧನಕ್ಕೆ ಸಿಸಿಬಿ ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದಾರೆ.

ಇಲ್ಲಿನ ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‍ಐಆರ್ ನಲ್ಲಿ ಮೊದಲನೆ ಆರೋಪಿಯಾಗಿರುವ ಶಿವಪ್ರಕಾಶ್ ಯಾನೆ ಚಪ್ಪಿ, ಆರನೆ ಆರೋಪಿ ಆದಿತ್ಯ ಆಳ್ವ ಹಾಗೂ ಫಾಝಿಲ್ ಬಂಧನಕ್ಕೆ ಶೋಧ ಕಾರ್ಯ ಕೈಗೊಂಡಿದ್ದು, ಈ ಮೂವರು ಹೊರರಾಜ್ಯಗಳಲ್ಲಿ ತಲೆಮರೆಸಿಕೊಂಡಿರುವ ಅನುಮಾನ ವ್ಯಕ್ತವಾಗಿದೆ.

ಈ ಮೂವರು ನಟಿಯರಾದ ಸಂಜನಾ, ರಾಗಿಣಿ ಸೇರಿದಂತೆ ಈಗಾಗಲೇ ಬಂಧಿತರಾಗಿರುವ ಆರೋಪಿಗಳೊಂದಿಗೆ ಸಂಪರ್ಕ ಹೊಂದಿದ್ದರು. ಪ್ರಭಾವಿ ವ್ಯಕ್ತಿಗಳಿಗೆ, ಗಣ್ಯರ ಮಕ್ಕಳಿಗೆ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಆರೋಪ ಇದೆ. ಇವರನ್ನು ಬಂಧಿಸಿದರೆ ಹೆಚ್ಚಿನ ಮಾಹಿತಿ ದೊರೆಯಲಿದೆ ಎನ್ನುತ್ತಾರೆ ತನಿಖಾಧಿಕಾರಿಗಳು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News