ಮಂಗಳೂರು ಪಿಸಿಐಟಿ ವರ್ಗಾವಣೆ ನಿರ್ಧಾರ ವಾಪಾಸ್

Update: 2020-09-17 15:26 GMT

ಉಡುಪಿ, ಸೆ.17: ಈವರೆಗೆ ಮಂಗಳೂರಿನಲ್ಲಿ ಕಾರ್ಯ ನಿರ್ವಹಿಸುತಿದ್ದ ಆದಾಯ ತೆರಿಗೆ ಪ್ರಧಾನ ಆಯುಕ್ತರ (ಪಿಸಿಐಟಿ) ಕಚೇರಿಯನ್ನು ಗೋವಾದ ಪಣಜಿಗೆ ಸ್ಥಳಾಂತರಿಸುವ ತನ್ನ ನಿರ್ಧಾರವನ್ನು ಕೇಂದ್ರ ಹಣಕಾಸು ಸಚಿವಾಲಯ ಹಿಂಪಡೆದಿದೆ ಎಂದು ಐಸಿಎಐನ ಉಡುಪಿ ಶಾಖೆಯ ಅಧ್ಯಕ್ಷ ಪ್ರದೀಪ್ ಜೋಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರು ಈ ಕುರಿತು ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಮಂಗಳೂರಿನಲ್ಲಿರುವ ಪಿಸಿಐಟಿ ಕಚೇರಿಯನ್ನು ಮಂಗಳೂರಿನಲ್ಲೇ ಉಳಿಸಿಕೊಳ್ಳು ವಂತೆ ಹಾಗೂ ಗೋವಾಕ್ಕೆ ಸ್ಥಳಾಂತರಿಸುವ ಬಗ್ಗೆ ಹೊರಡಿಸಿದ ಆದೇಶವನ್ನು ರದ್ದು ಪಡಿಸುವ ಕುರಿತು ಮಾತುಕತೆ ನಡೆಸಿದರು ಎಂದು ಇಂದು ಸಂಜೆ ಬಿಡುಗಡೆಗೊಳಿಸಿದ ಪ್ರಕಟಣೆಯಲ್ಲಿ ಜೋಗಿ ವಿವರಿಸಿದ್ದಾರೆ.

ಸುಮಾರು ನಾಲ್ಕು ಲಕ್ಷ ಆದಾಯ ತೆರಿಗೆ ಪಾವತಿದಾರರನ್ನು ಹೊಂದಿರುವ ಈ ಕಚೇರಿಯನ್ನು ವರ್ಗಾಯಿಸದಂತೆ ಐಸಿಎಐನ ಮಂಗಳೂರು ಮತ್ತು ಉಡುಪಿ ಶಾಖೆಗಳು, ಕೆನರಾ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರೀಸ್ ಮಂಗಳೂರು ಹಾಗೂ ಉಡುಪಿ ಚೇಂಬರ್ ಆಫ್ ಕಾಮರ್ಸ್ ಸೇರಿದಂತೆ ವಿವಿಧ ವೇದಿಕೆಗಳು ಈಗಾಗಲೇ ಹಣಕಾಸು ಸಚಿವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದ್ದವು.

ಇದೀಗ ಪಿಸಿಐಟಿ ಕಚೇರಿಯನ್ನು ಮಂಗಳೂರಿನಿಂದ ಗೋವಾಕ್ಕೆ ಸ್ಥಳಾಂತರಿ ಸುವ ಹಿಂದಿನ ಅಧಿಸೂಚನೆಯನ್ನು ವಾಪಾಸು ಪಡೆಯಲು ನಿರ್ಧರಿಸಲಾಗಿದ್ದು, ಕಚೇರಿಯನ್ನು ಮಂಗಳೂರಿನಲ್ಲೇ ಉಳಿಸಿಕೊಳ್ಳಲು ನಿರ್ಧಾರ ತೆಗೆದು ಕೊಳ್ಳಲಾಗಿದೆ ಎಂದೂ ಪ್ರದೀಪ್ ಜೋಗಿ ತಿಳಿಸಿದ್ದಾರೆ.

ತಮ್ಮ ಈ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ ಎಲ್ಲರಿಗೂ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News