ಬೈಕ್ ಢಿಕ್ಕಿ : ಪಾದಚಾರಿ ಮೃತ್ಯು

Update: 2020-09-17 15:45 GMT

ಕುಂದಾಪುರ, ಸೆ.17: ಹಟ್ಟಿಯಂಗಡಿ ಗ್ರಾಮದ ರೈಲ್ವೆ ಸೇತುವೆಯ ಬಳಿಯ ರಸ್ತೆಯಲ್ಲಿ ಸೆ.16ರಂದು ರಾತ್ರಿ 9ಗಂಟೆ ಸುಮಾರಿಗೆ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.

ಮೃತರನ್ನು ಕುಪ್ಪಯ್ಯ ಶೆಟ್ಟಿ ಎಂದು ಗುರುತಿಸಲಾಗಿದೆ. ತಲ್ಲೂರು ಕಡೆಯಿಂದ ನೇರಳಕಟ್ಟೆ ಕಡೆಗೆ ಹೋಗುತ್ತಿದ್ದ ಬೈಕ್, ರಸ್ತೆಯ ಬದಿಯಲ್ಲಿ ನಡೆದು ಕೊಂಡು ಹೋಗುತ್ತಿದ್ದ ಕುಪ್ಪಯ್ಯ ಶೆಟ್ಟಿಗೆ ಹಿಂದಿನಿಂದ ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದ ರಿಂದ ಗಂಭೀರವಾಗಿ ಗಾಯಗೊಂಡ ಅವರು ಸ್ಥಳ ದಲ್ಲಿಯೇ ಮೃತಪಟ್ಟರು ಎಂದು ತಿಳಿದುಬಂದಿದೆ.

ಈ ಬಗ್ಗೆ ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News