ಬೆಂಗಳೂರಿನಲ್ಲಿ 3,799 ಮಂದಿಗೆ ಕೊರೋನ ದೃಢ; ಸೋಂಕಿತರ ಸಂಖ್ಯೆ 1.84 ಲಕ್ಷಕ್ಕೆ ಏರಿಕೆ

Update: 2020-09-17 16:41 GMT

ಬೆಂಗಳೂರು, ಸೆ.17: ನಗರದಲ್ಲಿ ಗುರುವಾರದಂದು 3,799 ಜನರಿಗೆ ಕೊರೋನ ಸೋಂಕು ದೃಢಪಟ್ಟಿದೆ. 2,184 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಸೋಂಕಿಗೆ 34 ಜನರು ಮೃತರಾಗಿದ್ದಾರೆ.

ನಗರದಲ್ಲಿ ಇಲ್ಲಿಯವರೆಗೆ ಒಟ್ಟು 1,84,082 ಜನರಿಗೆ ಸೋಂಕು ದೃಢಪಟ್ಟಿದ್ದು, ಇಲ್ಲಿಯವರೆಗೆ 2,555 ಜನರು ಸೋಂಕಿಗೆ ಬಲಿಯಾಗಿದ್ದಾರೆ. 1,40,473 ಜನರು ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳು ಒಳಗೊಂಡಂತೆ 41,053 ಕೊರೋನ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿರುವ 150 ಜ್ವರ ಚಿಕಿತ್ಸಾಲಯದಲ್ಲಿ ಒಟ್ಟು 2,32,779 ವ್ಯಕ್ತಿಗಳಿಗೆ ತಪಾಸಣೆ ಮಾಡಲಾಗಿದೆ.

ಬುಧವಾರದ ಬಿಬಿಎಂಪಿ ಕೋವಿಡ್ ವರದಿಯಲ್ಲಿ ನಗರದಲ್ಲಿ ಒಟ್ಟು ಸಕ್ರಿಯ 15,806 ಕಂಟೈನ್ಮೆಂಟ್ ಝೋನ್‍ಗಳಿವೆ. ಇದುವರೆಗೂ 30,928 ಕಂಟೈನ್ಮೆಂಟ್ ಝೋನ್‍ಗಳನ್ನು ಗುರುತಿಸಲಾಗಿದೆ.

ನಗರದಲ್ಲಿ ಒಟ್ಟು 4,97,883 ಪ್ರಾಥಮಿಕ ಸಂಪರ್ಕಿತರನ್ನು ಗುರುತಿಸಲಾಗಿದ್ದು, ದ್ವಿತೀಯ ಸಂಪರ್ಕಿತ 6,16,160 ಜನರನ್ನು ಗುರುತಿಸಲಾಗಿದೆ. ನಗರದಲ್ಲಿ 12,91,212 ಜನರಿಗೆ ಕೊರೋನ ಪರೀಕ್ಷೆ ನಡೆಸಲಾಗಿದ್ದು, ಇದರಲ್ಲಿ ಪಾಸಿಟಿವ್ ಪ್ರಮಾಣ ಶೇ.13.96ರಷ್ಟಿದೆ. ಕೊರೋನ ಸೋಂಕಿಗೆ ಮೃತರಾಗುತ್ತಿರುವ ಪ್ರಮಾಣ ಶೇ.1.41ರಷ್ಟಿದ್ದು, ಗುಣಮುಖರಾಗುತ್ತಿರುವ ಪ್ರಮಾಣ ಶೇ.76.71ರಷ್ಟಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News