ಮಾದಕ ವಸ್ತು ಮಾರಾಟ: ವಿದೇಶಿ ಪ್ರಜೆ ಸೇರಿ ಇಬ್ಬರ ಬಂಧನ

Update: 2020-09-18 11:54 GMT

ಬೆಂಗಳೂರು, ಸೆ.18: ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆಫ್ರಿಕಾ ಪ್ರಜೆ ಸೇರಿ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಪಶ್ಚಿಮ ವಿಭಾಗದ ಪೊಲೀಸರು 2 ಲಕ್ಷ ರೂ. ಮೌಲ್ಯದ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ.

ಆಫ್ರಿಕಾದ ಕ್ಯಾಮರೂನ್‍ನ ಜಾನ್ ಎರಿಕ್(25) ಹಾಗೂ ಹೆಣ್ಣೂರಿನ ಬೋವಾಸ್ ಶಾ ಜಿ(27) ಬಂಧಿತ ಆರೋಪಿಗಳಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳು ರಾಜಾಜಿನಗರದ 1ನೇ ಮುಖ್ಯ ರಸ್ತೆಯ ಬಳಿ ಬೈಕ್‍ನಲ್ಲಿ ಎಂಡಿಎಂಎ ಮಾದಕ ವಸ್ತು ತಂದು ಮಾರಾಟ ಮಾಡಲು ಯತ್ನಿಸುತ್ತಿದ್ದಾಗ ಕಾರ್ಯಾಚರಣೆ ನಡೆಸಿದ ಮಾಗಡಿ ರಸ್ತೆ ಠಾಣಾ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಇವರಿಂದ 70 ಗ್ರಾಂ ತೂಕದ ಎಂಡಿಎಂಎ, 2 ಬೈಕ್‍ಗಳು, 4 ಮೊಬೈಲ್‍ಗಳನ್ನು ವಶಪಡಿಸಿಕೊಳ್ಳಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News