ನಿವೃತ್ತ ಡಿಜಿಪಿ ಎ.ಪಿ.ದೊರೆ ನಿಧನ

Update: 2020-09-18 12:47 GMT

ಬೆಂಗಳೂರು, ಸೆ.18: ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದ ಎ.ಪಿ.ದೊರೆ ಅವರು ಶುಕ್ರವಾರ ಮುಂಜಾನೆ ನಿಧನರಾಗಿದ್ದಾರೆ.

1996ನೇ ಸಾಲಿನಲ್ಲಿ ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ ನಿವೃತ್ತರಾಗಿದ್ದ ದೊರೆ ಅವರಿಗೆ 80 ವರ್ಷ ವಯಸ್ಸಾಗಿತ್ತು ಎಂದು ತಿಳಿದುಬಂದಿದೆ.

ದೊರೆ ಅವರು ನಗರದ ದೊಡ್ಡಬೆಲೆ ರಸ್ತೆಯ ರಾಜರಾಜೇಶ್ವರಿ ಮೆಡಿಕಲ್ ಕಾಲೇಜು ಬಳಿಯ ಅಪಾರ್ಟ್‍ಮೆಂಟ್‍ವೊಂದರಲ್ಲಿ ವಾಸವಾಗಿದ್ದರು. ರಾಜ್ಯ ಪೊಲೀಸ್ ಇಲಾಖೆಯ ಹಲವು ಹುದ್ದೆಗಳನ್ನು ನಿಭಾಯಿಸಿದ್ದ ದೊರೆ ಅವರು ನಿವೃತ್ತರಾಗಿ 23 ವರ್ಷವಾಗಿದೆ. ಇವರ ನಿಧನಕ್ಕೆ ಇಲಾಖೆಯ ಹಿರಿಯ ಅಧಿಕಾರಿಗಳು ಸಂತಾಪ ಸೂಚಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News