ಮೀಸಲಾತಿ ಹೆಚ್ಚಳಕ್ಕೆ ಒತ್ತಾಯಿಸಿ ಸಚಿವ ಆನಂದ್‍ ಸಿಂಗ್ ಮನೆ ಎದುರು ಧರಣಿ

Update: 2020-09-18 15:03 GMT

ಬಳ್ಳಾರಿ, ಸೆ.18: ಎಸ್ಸಿ, ಎಸ್ಟಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ಕುರಿತು ನಿವೃತ್ತ ನ್ಯಾ.ಎಚ್.ಎನ್.ನಾಗಮೋಹನ್‍ ದಾಸ್ ಅವರು ಸರಕಾರಕ್ಕೆ ಸಲ್ಲಿಸಿರುವ ವರದಿಯನ್ನು ಜಾರಿಗೆ ತರಬೇಕೆಂದು ಒತ್ತಾಯಿಸಿ ದಲಿತ ಹಕ್ಕುಗಳ ಸಮಿತಿ ಕಾರ್ಯಕರ್ತರು ಹೊಸಪೇಟೆ ನಗರದಲ್ಲಿರುವ ಜಿಲ್ಲಾ ಉಸ್ತುವಾರಿ ಸಚಿವ ಆನಂದ್‍ ಸಿಂಗ್ ಮನೆ ಎದುರು ಪ್ರತಿಭಟನೆ ನಡೆಸಿದರು.

ಜೊತೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಬರೆದ ಮನವಿ ಪತ್ರವನ್ನು ಸಚಿವರಿಗೆ ಸಲ್ಲಿಸಿದರು.

ಮುಂಬರುವ ವಿಧಾನಸಭೆ ಅಧಿವೇಶನದಲ್ಲಿ ವರದಿ ಕುರಿತು ಚರ್ಚೆ ನಡೆಯಬೇಕು. ಎಸ್ಸಿ, ಎಸ್ಟಿ ಸಮುದಾಯದ ಜನಸಂಖ್ಯೆಗೆ ಪೂರಕವಾಗಿ ಮೀಸಲಾತಿ ಹೆಚ್ಚಳ ಮಾಡಬೇಕು. ಆಯಾ ಜಾತಿಗಳ ಜನಸಂಖ್ಯೆಗೆ ಅನುಗುಣವಾಗಿ ಒಳಮೀಸಲಾತಿ ಜಾರಿಗೆ ತರಬೇಕು. ಖಾಸಗಿ ಕ್ಷೇತ್ರದಲ್ಲೂ ಮೀಸಲಾತಿ ಕಲ್ಪಿಸಲು ಸರಕಾರ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.

ಕೇಂದ್ರ ಮತ್ತು ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕು. ನಿರುದ್ಯೋಗಿ ಯುವಕರಿಗೆ 5 ಸಾವಿರ ರೂ. ನಿರುದ್ಯೋಗ ಭತ್ಯೆ ನೀಡಬೇಕು. ಸರಕಾರಿ ಸ್ವಾಮ್ಯದ ಸಂಸ್ಥೆಗಳ ಖಾಸಗೀಕರಣ ಕೈಬಿಡಬೇಕೆಂದು ಒತ್ತಾಯಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News