ಯಡಿಯೂರಪ್ಪ ನೇತೃತ್ವದ ಸರ್ಕಾರ ಸತ್ತು ಹೋಗಿದೆ: ಸಿದ್ದರಾಮಯ್ಯ ವಾಗ್ದಾಳಿ

Update: 2020-09-18 16:14 GMT

ಮೈಸೂರು,ಸೆ.18: ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದ ಸರ್ಕಾರ ಸತ್ತು ಹೋಗಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ನಗರದ ಉದಯಗಿರಿಯಲ್ಲಿ ಕೆಪಿಸಿಸಿ ವೈದ್ಯರ ಘಟಕ ಆಯೋಜಿಸಿರುವ ಕೋವಿಡ್ ಹೆಲ್ತ್ ಸೆಂಟರ್ ಉದ್ಘಾಟನಾ ಕಾರ್ಯಕ್ರಮಕ್ಕೆ ಶುಕ್ರವಾರ ಆಗಮಿಸಿದ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.

ರಾಜ್ಯದಲ್ಲಿ ಇಬ್ಬರು ಸಿಎಂಗಳಿದ್ದಾರೆ. ಒಂದು ಬಿ.ಎಸ್.ಯಡಿಯೂರಪ್ಪ ಮತ್ತೊಬ್ಬರು ಅವರ ಮಗ ವಿಜಯೇಂದ್ರ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜ್ಯದಲ್ಲಿ ಆಡಳಿತ ನಡೆಸಲು ಸಂಪೂರ್ಣ ವಿಫಗೊಂಡಿದ್ದು, ಸರ್ಕಾರ ಇದೆಯೋ ಇಲ್ಲವೊ ಎಂದು ಜನರಿಗೆ ಅರ್ಥವಾಗುತ್ತಿಲ್ಲ. ಒಂದು ರೀತಿಯಲ್ಲಿ ರಾಜ್ಯ ಸರ್ಕಾರ ಸತ್ತು ಹೋಗಿದೆ ಎಂದು ಕಿಡಿಕಾರಿದರು.

ರಾಜ್ಯದ ಯಾವ ಸಚಿವರೂ ಕ್ರಿಯಾಶೀಲವಾಗಿ ಕೆಲಸ ಮಾಡುತ್ತಿಲ್ಲ. ಇವರ ಎಲ್ಲಾ ನಿಷ್ಕ್ರಿಯತೆಗಳನ್ನು ಅಧಿವೇಶನದಲ್ಲಿ ಚರ್ಚಿಸುತ್ತೇವೆ. ಕೋವಿಡ್ ನಲ್ಲಿ ಭ್ರಷ್ಟಾಚಾರ, ಡಿ.ಜೆ.ಹಳ್ಳಿ, ಕೆ.ಜೆ.ಹಳ್ಳಿ ಪ್ರಕರಣ, ಡ್ರಗ್ಸ್ ಮತ್ತು ಯಡಿಯೂರಪ್ಪ ಆಡಳಿತದಲ್ಲಿನ ಅವರ ಮಗನ ಹಸ್ತಕ್ಷೇಪ ಸೇರಿದಂತೆ ಅನೇಕ ವಿಚಾರಗಳನ್ನು ಮಂಡಿಸುತ್ತೇವೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಆಡಳಿತ ನಡೆಸುವಲ್ಲಿ ಸಂಪೂರ್ಣ ವಿಫಲಗೊಂಡಿವೆ ಎಂದು ಸಿದ್ದರಾಮಯ್ಯ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News