ಸಫಾಯಿ ಕರ್ಮಚಾರಿ ಅವಲಂಬಿತರಿಗೆ ಉದ್ಯೋಗ- ಸಾಲ ಸೌಲಭ್ಯ

Update: 2020-09-18 17:46 GMT

ಬೆಂಗಳೂರು, ಸೆ. 18: ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ದಿ ನಿಗಮದ ವತಿಯಿಂದ 2020-2021ನೆ ಸಾಲಿಗೆ ಸಫಾಯಿ ಕರ್ಮಚಾರಿಗಳು, ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಗಳು ಮತ್ತು ಅವರ ಅವಲಂಬಿತರು ಹಾಗೂ ಮೃತಪಟ್ಟ ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಗಳ ಅವಲಂಬಿತರಿಗೆ ಸ್ವಯಂ ಉದ್ಯೋಗ ಯೋಜನೆಯಡಿ ನೇರ ಸಾಲ ಯೋಜನೆ, ಉದ್ಯಮಶೀಲತಾ ಯೋಜನೆಯಡಿ ಐರಾವತ ಯೋಜನೆ, ಪ್ರೇರಣಾ ಯೋಜನೆ ಗಂಗಾ ಕಲ್ಯಾಣ ಯೋಜನೆ, ಭೂ ಒಡೆತನ ಯೋಜನೆಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಅರ್ಜಿಗಳನ್ನು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ದಿ ನಿಗಮದ ವೆಬ್ ಸೈಟ್ www.ksskdc.kar.nic.in  ನಲ್ಲಿ ಪಡೆಯಬಹುದಾಗಿದ್ದು, ಸೆ.30ರೊಳಗೆ ಆನ್‍ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 99640 33260 ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ವಿಭಾಗದ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ದಿ ನಿಗಮದ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News