ಕೋವಿಡ್ ಪರೀಕ್ಷೆಗೆ ಒಳಗಾದ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ

Update: 2020-09-18 17:51 GMT

ಬೆಂಗಳೂರು, ಸೆ. 18: ಇದೇ ತಿಂಗಳ 21ರಿಂದ ಆರಂಭಗೊಳ್ಳಲಿರುವ ವಿಧಾನ ಮಂಡಲ ಅಧಿವೇಶನದ ಹಿನ್ನೆಲೆಯಲ್ಲಿ ಎಲ್ಲ ಸದಸ್ಯರು 72 ಗಂಟೆ ಮುಂಚಿತವಾಗಿ ಕೋವಿಡ್-19 ಪರೀಕ್ಷೆಗೆ ಒಳಗಾಗುವುದು ಕಡ್ಡಾಯವಾಗಿದ್ದು, ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಆರ್‍ಟಿ-ಪಿಸಿಆರ್ ಪರೀಕ್ಷೆಗೆ ಒಳಗಾದರು.

ಶುಕ್ರವಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಶಾಸಕರು, ಪರಿಷತ್ ಸದಸ್ಯರು, ಸಚಿವಾಲಯದ ಅಧಿಕಾರಿಗಳು, ಸಿಬ್ಬಂದಿ ಹಾಗೂ ಮಾಧ್ಯಮ ಪ್ರತಿನಿಧಿಗಳಿಗಾಗಿ ಏರ್ಪಡಿಸಿದ್ದ ಕೋವಿಡ್-19 ಪರೀಕ್ಷೆಗೆ ವ್ಯವಸ್ಥೆ ಮಾಡಿದ್ದು, ಸ್ಪೀಕರ್ ಕಾಗೇರಿ ಅವರು ಎಲ್ಲರಂತೆ ತಮ್ಮ ವೈಯಕ್ತಿಕ ಮೊಬೈಲ್ ಸಂಖ್ಯೆಯನ್ನು ನೀಡಿ ಒಟಿಪಿ ಸಂಖ್ಯೆ ಬಂದ ಬಳಿಕ ತಮ್ಮ ಮೂಗಿನ ಮತ್ತು ಗಂಟಲು ದ್ರವವನ್ನು ನೀಡಿದರು. ಆ ಮೂಲಕ ಎಲ್ಲ ಸದಸ್ಯರು ಕೋವಿಡ್ ಪರೀಕ್ಷೆಗೆ ಒಳಗಾಗುವಂತೆ ಪ್ರೇರೇಪಿಸಿದರು.

ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಕೋವಿಡ್ ಪರೀಕ್ಷೆ ವ್ಯವಸ್ಥೆ ಕಲ್ಪಿಸಿದ್ದು, ಕಲಾಪಕ್ಕೆ ಹಾಜರಾಗುವ ಶಾಸಕರು, ಮೇಲ್ಮನೆ ಸದಸ್ಯರು, ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಗೂ ಮಾಧ್ಯಮ ಪ್ರತಿನಿಧಿಗಳು ಕಡ್ಡಾಯವಾಗಿ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಸ್ಪೀಕರ್ ಕಾಗೇರಿ ಸಲಹೆ ಮಾಡಿದರು. ಅಲ್ಲದೆ, ಆರ್‍ಟಿ-ಪಿಸಿಆರ್ ಪರೀಕ್ಷೆಗೆ ಕಲ್ಪಿಸಿರುವ ವ್ಯವಸ್ಥೆಯನ್ನು ಇದೇ ವೇಳೆ ಪರಿಶೀಲನೆ ನಡೆಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News